ಮಂಗಳವಾರ, ಏಪ್ರಿಲ್ 13, 2021
29 °C

ತಾಜ್‌ಮಹಲ್‌ ಆವರಣದಲ್ಲಿ ಶಿವಪೂಜೆಗೆ ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರ ಬಂಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಆಗ್ರಾ: ಶಿವರಾತ್ರಿ ಹಿನ್ನೆಲೆಯಲ್ಲಿ ತಾಜ್‌ಮಹಲ್‌ನ ಆವರಣದೊಳಗೆ ಶಿವಪೂಜೆಗೆ ಮುಂದಾಗಿದ್ದ ಹಿಂದೂ ಮಹಾಸಭಾದ ಮೂವರು ಸದಸ್ಯರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಐತಿಹಾಸಿಕ ತಾಜ್‌ಮಹಲ್‌ನಲ್ಲಿ ನಿಯೋಜಿಸಲಾಗಿರುವ ಕೇಂದ್ರ ಭದ್ರತಾ ಪಡೆ ಸಿಬ್ಬಂದಿಯು ಮೂವರನ್ನು ವಶಕ್ಕೆ ಪಡೆದು ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಹಿಳೆಯೂ ಸೇರಿದಂತೆ ಹಿಂದೂ ಮಹಾಸಭಾದ ಮೂವರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಾಜ್‌ಗಂಜ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಉಮೇಶ್ ಚಂದ್ರ ತ್ರಿಪಾಠಿ ತಿಳಿಸಿದ್ದಾರೆ.

ಹಿಂದೂ ಮಹಾಸಭಾದ ಪ್ರಾಂತೀಯ ಅಧ್ಯಕ್ಷೆ ಮೀನಾ ದಿವಾಕರ್ ಎಂಬುವವರು ತಾಜ್‌ಮಹಲ್‌ ಆವರಣದಲ್ಲಿರುವ ಮುಖ್ಯ ತೊಟ್ಟಿಯ ಬಳಿ ಇಬ್ಬರು ವ್ಯಕ್ತಿಗಳೊಂದಿಗೆ ಪೂಜೆ ಸಲ್ಲಿಸಲು ಮುಂದಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮೊಘಲರ ಆಳ್ವಿಕೆಯಲ್ಲಿ ನಿರ್ಮಾಣವಾಗಿರುವ ಸ್ಮಾರಕವು ಭಾರತದ ಪುರಾತತ್ವ ಇಲಾಖೆಯು ಅಡಿಯಲ್ಲಿ ಸಂರಕ್ಷಿಸಲ್ಪಟ್ಟಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು