ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶಿ: ಜ್ಞಾನವಾಪಿ ಮಸೀದಿಯ ಹಿಂದೂ ದೇವರ ವಿಗ್ರಹಗಳ ಪೂಜೆಗೆ ಅವಕಾಶ ಕೋರಿ ಅರ್ಜಿ

Last Updated 21 ಆಗಸ್ಟ್ 2021, 12:55 IST
ಅಕ್ಷರ ಗಾತ್ರ

ವಾರಾಣಸಿ: ವಿವಾದಿತ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ಮಾತಾ ಶೃಂಗಾರ್ ಗೌರಿ (ಹಿಂದೂ ದೇವತೆ) ಮತ್ತು ಇತರ ದೇವರುಗಳು, ದೇವತೆಗಳನ್ನು ಪೂಜಿಸಲು ಅನುಮತಿ ಕೋರಿ ಐದು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ವಾರಾಣಸಿ ನ್ಯಾಯಾಲಯವು ವಿಚಾರಣೆಗೆ ಅಂಗೀಕರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮತ್ತು ಇತರರಿಂದ ನ್ಯಾಯಾಲಯ ಪ್ರತಿಕ್ರಿಯೆ ಕೇಳಿದೆ.

ಮಹಿಳೆಯರು ತಮ್ಮ ಅರ್ಜಿಯಲ್ಲಿ ಹಳೆಯ ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿರುವ ದೇವರು, ದೇವತೆಗಳ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ನಾವು ಅರ್ಹರು. ಆದರೆ, ಈವರೆಗೆ ತಮ್ಮ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂದು ವಾದಿಸಿದ್ದಾರೆ.

ದೇವತೆಗಳ ವಿಗ್ರಹಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಮತ್ತು ಜ್ಞಾನವಾಪಿ ಮಸೀದಿ ನಿರ್ವಹಣಾ ಸಮಿತಿಗೆ ನ್ಯಾಯಾಲಯ ನಿರ್ದೇಶನ ನೀಡಬೆಕೆಂದೂ ಸಹ ಅವರು ಕೋರಿದ್ದಾರೆ.

ಈ ಕುರಿತಂತೆ ರಾಜ್ಯ ಸರ್ಕಾರ, ಕಾಶಿ ವಿಶ್ವನಾಥ ಟ್ರಸ್ಟ್ ಮತ್ತು ಜ್ಞಾನವಾಪಿ ಮಸೀದಿ ನಿರ್ವಹಣಾ ಸಮಿತಿ ಮತ್ತು ಇತರ ಅಧಿಕಾರಿಗಳಿಂದ ಪ್ರತಿಕ್ರಿಯೆ ಕೇಳಿರುವ ಹಿರಿಯ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 10ಕ್ಕೆ ನಿಗದಿಪಡಿಸಿದ್ದಾರೆ.

ಮೊಘಲ್ ದೊರೆ ಔರಂಗಜೇಬನು ಎರಡು ಸಾವಿರ ವರ್ಷಗಳ ಹಿಂದೆ ನಿರ್ಮಿಸಿದ ಕಾಶಿ ವಿಶ್ವನಾಥ ದೇವಸ್ಥಾನವನ್ನು ನೆಲಸಮಗೊಳಿಸಿದ್ದಾನೆ ಮತ್ತು ಜ್ಞಾನವಾಪಿ ಮಸೀದಿ ಕೂಡ ದೇವಾಲಯದ ಒಂದು ಭಾಗವಾಗಿತ್ತು ಎಂದು ಹಿಂದೂಗಳು ವಾದಿಸುತ್ತಾರೆ.

ಈ ಹಿಂದೆ ವಾರಾಣಸಿಯ ನ್ಯಾಯಾಲಯವು ಕಾಶಿ ವಿಶ್ವನಾಥ ದೇವಸ್ಥಾನ-ಜ್ಞಾನವಾಪಿ ಮಸೀದಿ ಆವರಣದಲ್ಲಿ ಪುರಾತತ್ವ ಸಮೀಕ್ಷೆಗೆ ಆದೇಶಿಸಿತ್ತು. ನ್ಯಾಯಾಲಯವು ಭಾರತೀಯ ಪುರಾತತ್ವ ಸೊಸೈಟಿಗೆ ಐದು ಸದಸ್ಯರ ತಂಡವನ್ನು ರಚಿಸಲು ಮತ್ತು ಇಡೀ ಆವರಣವನ್ನು ಅಧ್ಯಯನ ಮಾಡಲು ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT