ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌: ಹಿಜ್ಬುಲ್‌ ಮುಜಾಹಿದ್ದೀನ್ ಕಮಾಂಡರ್‌ ಹತ್ಯೆ

Last Updated 4 ಜೂನ್ 2022, 2:14 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್ ಸಂಘಟನೆಯ ಸ್ವಯಂ ಘೋಷಿತ ಕಮಾಂಡರ್‌ನನ್ನು ಹತ್ಯೆ ಮಾಡಲಾಗಿದೆ.

ಕಾರ್ಯಾಚರಣೆ ಸಂದರ್ಭ ಮೂವರು ಯೋಧರು ಮತ್ತು ಓರ್ವ ನಾಗರಿಕ ಗಾಯಗೊಂಡಿದ್ದಾರೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.

'ಸ್ವಯಂ ಘೋಷಿತ ಹಿಜ್ಬುಲ್‌ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್‌ ನಿಸಾರ್‌ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. 1 ಎಕೆ 47 ರೈಫಲ್ ಸೇರಿದಂತೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದೆ' ಎಂದು ವಿಜಯ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಅನಂತನಾಗ್‌ ಜಿಲ್ಲೆಯ ರಿಶಿಪೋರಾ ಪ್ರದೇಶದಲ್ಲಿ ಶುಕ್ರವಾರ ಸಂಜೆ ಎನ್‌ಕೌಂಟರ್‌ ಕಾರ್ಯಾಚರಣೆ ಆರಂಭಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT