ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಹಿಜ್ಬುಲ್‌ ಮುಜಾಹಿದೀನ್ ಭಯೋತ್ಪಾದಕನ ಬಂಧನ

Last Updated 5 ಜೂನ್ 2022, 10:48 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್‌ ಉಗ್ರ ಸಂಘಟನೆಯ ತಾಲಿಬ್‌ ಹುಸೇನ್‌ ಎಂಬ ಭಯೋತ್ಪಾದಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೊಲೀಸರು, ರಾಷ್ಟ್ರೀಯ ರೈಫಲ್ಸ್‌ ಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿಆರು ವರ್ಷಗಳಿಂದಲೂ ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನಾಗಸೇನಿ ತೆಹಸಿಲ್‌ನ ರಾಶ್‌ಗ್ವಾರಿ ನಿವಾಸಿ ತಾಲಿಬ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಜಿಲ್ಲೆಯಲ್ಲಿ ಭಯೋತ್ಪಾದಕತೆಯನ್ನು ಪುನರುಜ್ಜೀವನಗೊಳಿಸುವ ಗುರಿ ಹೊಂದಿದ್ದ ಹಿಜ್ಬುಲ್‌ ಮುಜಾಹಿದೀನ್‌ಗೆ ಈ ಬಂಧನ ದೊಡ್ಡ ಹೊಡೆತವಾಗಿದೆ. 2016ರಲ್ಲಿ ತಾಲಿಬ್‌ ನಿಷೇಧಿತ ಉಗ್ರ ಸಂಘಟನೆಗೆ ಸೇರಿದ್ದ. ಯುವಕರನ್ನು ಸಂಘಟನೆಗೆ ಸೇರಿಸುವಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಆರೋಪಿಯ ಕುರಿತು ಖಚಿತ ಮಾಹಿತಿಯನ್ನು ಪಡೆದ ಪೊಲೀಸರು, ಈ ಪ್ರದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಮುನ್ನವೇ ಆತನನ್ನು ಬಂಧಿಸಿದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT