ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮ ಪುರಸ್ಕೃತರಿಗೆ ಔತಣಕೂಟ ಏರ್ಪಡಿಸಿದ ಕೇಂದ್ರ ಗೃಹ ಸಚಿವ ಅಮಿತಾ ಶಾ

Last Updated 23 ಮಾರ್ಚ್ 2023, 4:32 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮವಿಭೂಷಣ, ಪದ್ಮಭೂಷಣ, ಮತ್ತು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ 54 ಗಣ್ಯರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಔತಣಕೂಟ ಏರ್ಪಡಿಸಿದ್ದರು.

2023 ರ ಗೌರವಾನ್ವಿತ ಪದ್ಮ ಪ್ರಶಸ್ತಿ ಪುರಸ್ಕೃರಿಗೆ ಔತಣಕೂಟವನ್ನು ಆಯೋಜಿಸಿರುವುದು ಸಂತೋಷವಾಗಿದೆ. ಅವರು ಆಯ್ಕೆ ಮಾಡಿಕೊಂಡಿರುವ ವೃತ್ತಿ ವಲಯದಲ್ಲಿ ಬಹಳ ಉತ್ಸಾಹವನ್ನು ಹೊಂದಿದ್ದಾರೆ. ಇಂತಹ ಅದ್ಭುತ ವ್ಯಕ್ತಿಗಳೊಂದಿಗಿನ ಮಾತುಕತೆ ಮಹತ್ವದ ಅನುಭವ ನೀಡಿದೆ ಎಂದು #PeoplesPadma ಹ್ಯಾಶ್‌ಟ್ಯಾಗ್‌ ಬಳಸಿ ಅಮಿತ್ ಶಾ ಟ್ವೀಟ್‌ ಮಾಡಿದ್ದಾರೆ.‌

ಜನವರಿ 25 ರಂದು 106 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿತ್ತು.

ಮೂವರಿಗೆ ಪದ್ಮವಿಭೂಷಣ, ನಾಲ್ವರಿಗೆ ಪದ್ಮಭೂಷಣ ಹಾಗೂ 47 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ 54 ಜನರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಉಳಿದ 52 ಗಣ್ಯರಿಗೆ ಮತ್ತೊಂದು ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌. ಎಂ ಕೃಷ್ಣ, ಖ್ಯಾತ ಕೈಗಾರಿಕೋದ್ಯಮಿ ಕುಮಾರ್‌ ಮಂಗಲಂ ಬಿರ್ಲಾ ಮತ್ತು ಜನಪ್ರಿಯ ಹಿನ್ನಲೆ ಗಾಯಕ ಸುಮನ್‌ ಕಲ್ಯಾಣ್‌ಪುರ ರಾಷ್ಟ್ರಪತಿಗಳಿಂದ ಸನ್ಮಾನಿಸಲ್ಪಟ್ಟ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT