ಭಾನುವಾರ, ಮೇ 22, 2022
22 °C

ಪುಲ್ವಾಮ ಹುತಾತ್ಮರಿಗೆ ಗೌರವ ಸಲ್ಲಿಸಿದ ಅಮಿತ್‌ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ 2019ರಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಭದ್ರತಾ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಇಲ್ಲಿ ಗೌರವ ಸಲ್ಲಿಸಿದರು. ಈ ದಾಳಿಯಲ್ಲಿ ಮೃತಪಟ್ಟವರ ತ್ಯಾಗವನ್ನು ಭಾರತದ ಜನರು ಮರೆಯುವುದಿಲ್ಲ ಎಂದು ಅವರು ಹೇಳಿದರು.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್‌–ಎ–ಮೊಹಮ್ಮದ್‌ ನಡೆಸಿದ ಈ ದಾಳಿಯಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಅಸುನೀಗಿದ್ದರು.

‘2019ರಲ್ಲಿ ಈ ದಿನ ಪುಲ್ವಾಮದಲ್ಲಿ ನಡೆದ ಭೀಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಹುತಾತ್ಮರಿಗೆ ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಧೈರ್ಯ ಮತ್ತು ಸರ್ವೋಚ್ಚ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು