ಶುಕ್ರವಾರ, ಸೆಪ್ಟೆಂಬರ್ 17, 2021
21 °C

ಕೋವಿಡ್‌ ಔಷಧ ದಾಸ್ತಾನು: ಗಂಭೀರ್‌ ಪ್ರತಿಷ್ಠಾನದ ವಿರುದ್ಧದ ತನಿಖೆ ತಡೆಗೆ ನಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್ ಚಿಕಿತ್ಸೆ ಔಷಧಗಳ ಅಕ್ರಮ ದಾಸ್ತಾನು, ವಿತರಣೆಗೆ ಸಂಬಂಧಿಸಿ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಅವರ ಪ್ರತಿಷ್ಠಾನದ ವಿರುದ್ಧದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್‌.ಶಾ ಅವರಿದ್ದ ಪೀಠವು, ‘ಜನರು ಔಷಧಕ್ಕಾಗಿ ಪರಿತಪಿಸುತ್ತಿದ್ದ ವೇಳೆಯಲ್ಲಿ ಏಕಾಏಕಿ ಟ್ರಸ್ಟ್ ಮುಂದೆ ಬಂದು ಔಷಧ ಒದಗಿಸುವ ಭರವಸೆ ನೀಡುತ್ತದೆ’ ಎಂದಿತು.

‘ಇಂಥದ್ದು ಆಗಬಾರದು. ನಾವು ಈ ಬಗ್ಗೆ ಏನನ್ನೂ ಹೇಳಲು ಬಯಸುವುದಿಲ್ಲ’ ಎಂದೂ ಹೇಳಿದ ಪೀಠವು, ಸೂಕ್ತ ಪರಿಹಾರಕ್ಕಾಗಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.

ಪ್ರತಿಷ್ಠಾನವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೈಲಾಶ್‌ ವಾಸುದೇವ್  ಅರ್ಜಿ ಸಲ್ಲಿಸಿದ್ದು, ಪೀಠದ ನಿರಾಕರಣೆಯನ್ನು ಗಮನಿಸಿ ನಂತರ ಅರ್ಜಿಯನ್ನು ಹಿಂತೆಗೆದುಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು