ಪುಣೆ: ಇಲ್ಲಿನ ಗೂಗಲ್ ಕಂಪನಿ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿವಾನಂದ್ ಬಗಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11 ನೇ ಮಹಡಿಯಲ್ಲಿರುವ ಗೂಗಲ್ ಕಚೇರಿ ಆವರಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಆರೋಪಿ ಭಾನುವಾರ ರಾತ್ರಿ ಕರೆ ಮಾಡಿದ್ದ. ಕೂಡಲೇ ಕಚೇರಿ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.