ಬುಧವಾರ, ಆಗಸ್ಟ್ 10, 2022
21 °C

ಮತ್ತೆ ಏಮ್ಸ್‌ಗೆ ದಾಖಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಕೋವಿಡ್-19 ನಂತರದ ಚಿಕಿತ್ಸೆಗೆ ಒಳಪಟ್ಟು ಆಗಸ್ಟ್ 31 ರಂದು ಏಮ್ಸ್‌ನಿಂದ ಬಿಡುಗಡೆಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ರಾತ್ರಿ 11 ಗಂಟೆಗೆ ಮತ್ತೆ ಏಮ್ಸ್‌ಗೆ ದಾಖಲಿಸಲಾಗಿದೆ.

ಆಗಸ್ಟ್ 2ರಂದು ಕೊರೊನಾ ವೈರಸ್ ಸೋಂಕು ತಗುಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆಗಸ್ಟ್ 14ರಂದು ನಡೆಸಿದ ಸೋಂಕಿನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದರಿಂದ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಬಳಿಕ ಬಳಲಿಕೆ ಮತ್ತು ಮೈಕೈ ನೋವಿಂದಾಗಿ ಅವರನ್ನು ಮತ್ತೆ ಏಮ್ಸ್‌ಗೆ ದಾಖಲಿಸಲಾಗಿತ್ತು. 

ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ನಂತರ ಅವರು ಉಸಿರಾಟದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 'ಅವರ ಮೇಲೆ ನಿರಂತರವಾಗಿ ನಿಗಾವಹಿಸಲು ಆಸ್ಪತ್ರೆಯಲ್ಲಿಯೇ ಇರುವುದು ಉತ್ತಮ ಎಂದು ಭಾವಿಸಲಾಗಿದೆ' ಎಂದು ಏಮ್ಸ್ ಮೂಲವೊಂದು ತಿಳಿಸಿದೆ.

ಏಮ್ಸ್ ಆಸ್ಪತ್ರೆಯ ಕಾರ್ಡಿಯೊ ನ್ಯೂರೊ ಟವರ್‌ ವಿಭಾಗಕ್ಕೆ ರಾತ್ರಿ 11 ಗಂಟೆಗೆ ಅವರನ್ನು ದಾಖಲಿಸಲಾಗಿದೆ. ಸದ್ಯ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು