ಮಂಗಳವಾರ, ಸೆಪ್ಟೆಂಬರ್ 29, 2020
28 °C

ಅಮಿತ್ ಶಾಗೆ ಕೋವಿಡ್–19 ನೆಗೆಟಿವ್: ಟ್ವೀಟ್ ಡಿಲೀಟ್ ಮಾಡಿದ ಬಿಜೆಪಿ ನಾಯಕ ತಿವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Amit Shah

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೋವಿಡ್–19ನಿಂದ ಗುಣಮುಖರಾಗಿದ್ದಾರೆ. ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಬಿಜೆಪಿ ನಾಯಕ ಮನೋಜ್‌ ತಿವಾರಿ ಅವರು ಟ್ವೀಟ್‌ ಮಾಡಿದ್ದರು. ಆದರೆ, ಕೆಲಹೊತ್ತಿನ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ.

ಶಾ ಅವರು ಗುಣಮುಖರಾಗಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದಂತೆ, ಗೃಹ ಸಚಿವಾಲಯದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಶಾ ಅವರಿಗೆ ಮತ್ತೆ ಮಾದರಿ ಪರೀಕ್ಷೆ ನಡೆಸಿಲ್ಲ ಎಂದು ತಿಳಿಸಿದೆ.

ಗೃಹ ಸಚಿವರಿಗೆ ಕೋವಿಡ್-19 ಸೋಂಕು ಇರುವುದು ಆಗಸ್ಟ್‌ 2 ರಂದು ದೃಢಪಟ್ಟಿತ್ತು. ಹರಿಯಾಣದ ಗುರುಗ್ರಾಮದಲ್ಲಿರುವ ಮೆದಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್‌‌ ಶಾಗೆ ಕೋವಿಡ್‌ ದೃಢ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು