ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಶಾ ಆಸ್ಪತ್ರೆಯಿಂದ ಬಿಡುಗಡೆ

Last Updated 31 ಆಗಸ್ಟ್ 2020, 6:35 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ನಂತರದ ಚಿಕಿತ್ಸೆಗಾಗಿ ಇಲ್ಲಿನ ಏಮ್ಸ್ ಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ಕುರಿತು ಆಸ್ಪತ್ರೆಯು ಹೇಳಿಕೆ ನೀಡಿದೆ. 55 ವರ್ಷದ ಶಾ ಅವರು ಆಗಸ್ಟ್ 2ರಂದು ಟ್ವೀಟ್ ಮಾಡಿ, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ ಎಂದು ಪ್ರಕಟಿಸಿದ್ದರು. ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನೆಗೆಟಿವ್ ವರದಿ ಬಂದ ಬಳಿಕ ಬಿಡುಗಡೆ ಗೊಂಡಿದ್ದರು.

ತದನಂತರ ಆಯಾಸ, ಮೈ-ಕೈ ನೋವು ಕಾಣಿಸಿಕೊಂಡಿದ್ದ ಕಾರಣದಿಂದಾಗಿ ಏಮ್ಸ್ ಗೆ ದಾಖಲಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT