ದೆಹಲಿ ಪ್ರತಿಭಟನೆ: ಪೊಲೀಸ್, ರಕ್ಷಣಾಧಿಕಾರಿಗಳೊಂದಿಗೆ ಅಮಿತ್ ಶಾ ಮಾತುಕತೆ

ನವದೆಹಲಿ: ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿನ್ನಲೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪೊಲೀಸರು, ರಕ್ಷಣಾ ಸಿಬ್ಬಂದಿ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ.
ಪ್ರತಿಭಟನೆ ವೇಳೆ ಗಲಭೆಗಳಾಗದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಚರ್ಚಿಸಲಾಗಿದೆ.
ಗಲಭೆಗೆ ಪ್ರಚೋದನೆ ನೀಡುವ ಕನಿಷ್ಠ ಹತ್ತು ಗುಂಪುಗಳು ಪ್ರತಿಭಟನಾ ನಿರತ ರೈತರನ್ನು ಕೂಡಿಕೊಂಡಿರಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಅದರಂತೆ ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇದನ್ನೂ ಓದಿ: ಮಾತುಕತೆಗೆ ಬನ್ನಿ: ಮತ್ತೆ ಆಹ್ವಾನ
ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಸುಧಾರಣಾ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ಇಂದು ದೆಹಲಿ–ಜೈಪುರ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಹಾಗೆಯೇ ಸೋಮವಾರ (ಡಿ.14) ರಾಷ್ಟ್ರವ್ಯಾಪಿ ಪ್ರತಿಭಟನೆ ವಿಸ್ತರಿಸಲು ಯೋಜಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.