ಮಂಗಳವಾರ, ಆಗಸ್ಟ್ 16, 2022
22 °C

ಬಿಎಸ್‌ಎಫ್‌ ಧ್ವಜ ದಿನಾಚರಣೆ ಕಾರ್ಯಕ್ರಮಕ್ಕೆ ಅಮಿತ್‌ ಶಾ ಗೈರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಅಧಿಕೃತ ಕೆಲಸದಿಂದಾಗಿ ಬಿಎಸ್‌ಎಫ್‌ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಬಿಎಸ್‌ಎಫ್‌ನ 56ನೇ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿತ್ತು.

‘ಕೆಲವು ಅಧಿಕೃತ ಕೆಲಸಗಳಿಂದಾಗಿ ಅಮಿತ್‌ ಶಾ ಅವರಿಗೆ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ’ ಎಂದು ಗೃಹಸಚಿವಾಲಯವು ಬಿಎಸ್‌ಎಫ್‌ಗೆ ತಿಳಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದೀಗ ಅಮಿತ್‌ ಶಾ ಅವರ ಬದಲಿಗೆ ಗೃಹ  ಖಾತೆ ರಾಜ್ಯ ಸಚಿವ ನಿತ್ಯಾನಂದ್‌ ರೈ ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು