ಬುಧವಾರ, ನವೆಂಬರ್ 25, 2020
20 °C

ದೆಹಲಿಯಲ್ಲಿ ಹೆಚ್ಚಿದ ಕೋವಿಡ್–19 ಪ್ರಕರಣ: ಅಮಿತ್ ಶಾ– ಕೇಜ್ರಿವಾಲ್ ಸಭೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಒಂದೇ ದಿನ ಒಟ್ಟು 7,340 ಜನರಿಗೆ ಕೋವಿಡ್‌–19 ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸಾಂಕ್ರಾಮಿಕದ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು ಸರ್ಕಾರದೊಂದಿಗೆ ಸಭೆ ನಡೆಸಲಿದ್ದಾರೆ.

ಸಭೆಯು ಗೃಹ ಸಚಿವರ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ದೆಹಲಿ ಲೆಫ್ಟಿನೆಂಟ್‌ ಗೌವರ್ನರ್‌ ಅನಿಲ್‌ ಬೈಜಾಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಭಾಗವಹಿಸಲಿದ್ದಾರೆ. ದೆಹಲಿಯ ಏಮ್ಸ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಾಗುವ ನಿರೀಕ್ಷೆಯಿದೆ.

ದೆಹಲಿಯಲ್ಲಿ ಬುಧವಾರ 85 ಸಾವು ಹಾಗೂ 8,593 ಸೋಂಕು ಪ್ರಕರಣಗಳು ವರದಿಯಾಗಿದ್ದವು. ಮರುದಿನ (ಗುರುವಾರ) 104 ಸೋಂಕಿತರು ಮೃತಪಟ್ಟಿದ್ದರು. ಇದು ಕಳೆದ ಐದು ತಿಂಗಳಲ್ಲೇ ಗರಿಷ್ಠ ಸಂಖ್ಯೆಯಾಗಿದೆ.

ರಾಜಧಾನಿಯಲ್ಲಿ ಇದುವರೆಗೆ ಒಟ್ಟು 4,82,170 ಸೋಂಕು ಪ್ರಕರಣಗಳು ವರದಿಯಾಗಿವೆ. ಶನಿವಾರ 96 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 7,519ಕ್ಕೆ ಏರಿಕೆಯಾಗಿದೆ. ಸದ್ಯ 4,30,195 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 44,456 ಪ್ರಕರಣಗಳು ಸಕ್ರಿಯವಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು