ಭಾನುವಾರ, ಸೆಪ್ಟೆಂಬರ್ 19, 2021
24 °C

ಅಸ್ಸಾಂ–ಮಿಜೋರಾಂ ಗಡಿ ಹಿಂಸಾಚಾರ: ಅಮಿತ್‌ ಶಾ ವಿರುದ್ಧ ರಾಹುಲ್‌ ವಾಗ್ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜನರಲ್ಲಿ ದ್ವೇಷ ಮತ್ತು ಅಪನಂಬಿಕೆ ಬಿತ್ತುವ ಮೂಲಕ ದೇಶವನ್ನು ‘ವಿಫಲ’ಗೊಳಿಸಿದ್ದು ಈಗ ಇದರ ‍ಭಯಾನಕ ಪರಿಣಾಮಗಳನ್ನು ದೇಶ ಎದುರಿಸುತ್ತಿದೆ’ ಎಂದು  ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಮಿತ್‌ ಶಾ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದರು.

‘ಅಸ್ಸಾಂ ಮತ್ತು ಮಿಜೋರಾಂ ನಡುವಿಣ ಗಡಿ ಸಂಘರ್ಷದ ವೇಳೆ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಅಸ್ಸಾಂನ ಕನಿಷ್ಠ ಐವರು ಪೊಲೀಸರು ಮೃತ‍ಪಟ್ಟಿದ್ದಾರೆ. ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 60ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 

‘ಮಿಜೋರಾಂ ಪೊಲೀಸರು ಮೊದಲು ತಮ್ಮ ಅಧಿಕಾರಿಗಳು ಮತ್ತು ನಾಗರಿಕರ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಅಸ್ಸಾಂ ಸರ್ಕಾರ ಸೋಮವಾರ ಆರೋಪಿಸಿದೆ.

‘ಅಸ್ಸಾಂನ 200 ಪೊಲೀಸ್‌ ಸಿಬ್ಬಂದಿ ಬಲವಂತವಾಗಿ ಗಡಿ ದಾಟಲು ಪ್ರಯತ್ನಿಸಿದ್ದಾರೆ. ಅಲ್ಲದೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ನಮ್ಮ ಪೊಲೀಸ್‌ ಪಡೆ ಪ್ರತ್ಯುತ್ತರ ನೀಡಿದೆ’ ಎಂದು ಮಿಜೋರಾಂ ಗೃಹ ಸಚಿವ ಲಲಚಾಮಲಿಯಾನಾ ಹೇಳಿದ್ದಾರೆ.

ಈ ಬಗ್ಗೆ ಅಸ್ಸಾಂ ಮತ್ತು ಮಿಜೋರಾಂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಅಮಿತ್‌ ಶಾ ಅವರು, ‘ವಿವಾದಿತ ಗಡಿಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು