ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಅಧ್ಯಕ್ಷತೆಯ ರಾಜೀವ್ ಗಾಂಧಿ ಪ್ರತಿಷ್ಠಾನದ ವಿದೇಶಿ ದೇಣಿಗೆ ಲೈಸನ್ಸ್ ರದ್ದು

Last Updated 23 ಅಕ್ಟೋಬರ್ 2022, 5:05 IST
ಅಕ್ಷರ ಗಾತ್ರ

ನವದೆಹಲಿ: ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಸರ್ಕಾರೇತರ ಸಂಸ್ಥೆಯಾದ ರಾಜೀವ್ ಗಾಂಧಿ ಪ್ರತಿಷ್ಠಾನದ (ಆರ್‌ಜಿಎಫ್) 'ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಪರವಾನಗಿ'ಯನ್ನು ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಕೇಂದ್ರ ಸರ್ಕಾರ ರದ್ದು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020 ರಲ್ಲಿ ಗೃಹ ಸಚಿವಾಲದ ‘ಅಂತರ-ಸಚಿವಾಲಯ ಸಮಿತಿ’ ನಡೆಸಿದ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

‘ಹೌದು, ರಾಜೀವ್ ಗಾಂಧಿ ಪ್ರತಿಷ್ಠಾನದ ಎಫ್‌ಸಿಆರ್‌ಎ ಪರವಾನಗಿಯನ್ನು ರದ್ದು ಮಾಡಲಾಗಿದೆ. ಅದರ ವಿರುದ್ಧದ ತನಿಖೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರ್‌ಜಿಎಫ್‌ನ ಅಧ್ಯಕ್ಷರಾಗಿದ್ದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಹಣಕಾಸು ಸಚಿವ ಪಿ ಚಿದಂಬರಂ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ರಸ್ಟಿಗಳಾಗಿದ್ದಾರೆ.

ಆರ್‌ಜಿಎಫ್‌ 1991ರಲ್ಲಿ ಸ್ಥಾಪನೆಯಾಗಿತ್ತು. 1991 ರಿಂದ 2009 ರವರೆಗೆ ಆರೋಗ್ಯ, ವಿಜ್ಞಾನ–ತಂತ್ರಜ್ಞಾನ, ಮಹಿಳೆಯರು–ಮಕ್ಕಳು, ಅಂಗವಿಕಲರಿಗೆ ಬೆಂಬಲ ಸೇರಿದಂತೆ ಹಲವಾರು ನಿರ್ಣಾಯಕ ಸಂಗತಿಗಳಲ್ಲಿ ಆರ್‌ಜಿಎಫ್‌ ಕೆಲಸ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲೂ ಆರ್‌ಜಿಎಫ್‌ ಕೆಲಸ ಮಾಡಿದೆ ಎಂದು ಅದರ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT