ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಗಳ ಮಾಹಿತಿಗೆ ಕನ್ನ: ಸಿಸೋಡಿಯಾ ವಿರುದ್ಧ ಕ್ರಮಕ್ಕೆ ಗೃಹ ಸಚಿವಾಲಯ ಅನುಮತಿ

Last Updated 22 ಫೆಬ್ರುವರಿ 2023, 5:24 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿ ಪಕ್ಷಗಳ ಮಾಹಿತಿಗೆ ಕನ್ನ ಹಾಕಿದ ಆರೋಪದ ಮೇಲೆ (ಫೀಡ್‌ಬ್ಯಾಕ್ ಯೂನಿಟ್ ಸ್ನೂಪಿಂಗ್ ಪ್ರಕರಣ) ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಿಸೋಡಿಯಾ ವಿರುದ್ಧ ಹೊಸ ಪ್ರಕರಣ ದಾಖಲಿಸಲಿದೆ ಎಂದು ವರದಿಯಾಗಿದೆ.

ಈಗಾಗಲೇ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಸಿಸೋಡಿಯಾ ಸಿಬಿಐ ವಿಚಾರಣೆ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. 2015ರಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಂತರ, ಆಮ್ ಆದ್ಮಿ ಪಕ್ಷವು ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಪ್ರತಿಕ್ರಿಯೆ ಘಟಕವನ್ನು ರಚಿಸಿತು ಎಂದು ಹೇಳಲಾಗಿದೆ.

ಮನೀಶ್ ಸಿಸೋಡಿಯಾ ಅವರು ಸ್ನೂಪಿಂಗ್ ಘಟಕದ ಮುಖ್ಯಸ್ಥರಾಗಿದ್ದರು ಎಂದು ಸಿಬಿಐ ವರದಿ ತಿಳಿಸಿದೆ. ಆದರೆ, ಎಎಪಿ ಈ ಹಿಂದೆ ಆರೋಪಗಳನ್ನು ತಳ್ಳಿಹಾಕಿತ್ತು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಸಿಸೋಡಿಯಾ ಸೇರಿ ಇತರ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲು ಸಿಬಿಐಗೆ ಒಪ್ಪಿಗೆ ನೀಡಿದ್ದರು. ಎಎಪಿ ಸರ್ಕಾರವು ರಾಜಕೀಯ ಗುಪ್ತಚರವನ್ನು ಸಂಗ್ರಹಿಸಲು ವಿಜಿಲೆನ್ಸ್ ಇಲಾಖೆಯ ಅಡಿಯಲ್ಲಿ ಪ್ರತಿಕ್ರಿಯೆ ಘಟಕವನ್ನು ರಚಿಸಿದೆ ಎಂಬ ಆರೋಪಿಸಿದ್ದರು.

ಸಿಸೋಡಿಯಾ ತಿರುಗೇಟು: ನಿಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿತನದ ಸಂಕೇತವಾಗಿದೆ. ಆಮ್ ಆದ್ಮಿ ಪಕ್ಷ (ಎಎ‍ಪಿ) ಬೆಳೆದಂತೆ ನಮ್ಮ ಮೇಲೆ ಇನ್ನೂ ಹಲವು ಪ್ರಕರಣಗಳು ದಾಖಲಾಗುತ್ತವೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT