ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಮಾಜಿ ನಿರ್ದೇಶಕ ಅಲೋಕ್‌ ವರ್ಮಾ ವಿರುದ್ಧ ಕ್ರಮಕ್ಕೆ ಗೃಹ ಸಚಿವಾಲಯ ಶಿಫಾರಸು

Last Updated 4 ಆಗಸ್ಟ್ 2021, 8:15 IST
ಅಕ್ಷರ ಗಾತ್ರ

ನವದೆಹಲಿ: ಅಧಿಕಾರ ದುರ್ಬಳಕೆ ಮತ್ತು ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಮಾಜಿ ನಿರ್ದೇಶಕ ಅಲೋಕ್‌ ವರ್ಮಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಈ ಕುರಿತು ಕೇಂದ್ರ ಗೃಹ ಸಚಿವಾಲಯವು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ(ಡಿಒಪಿಟಿ) ಪತ್ರ ಬರೆದಿದ್ದು, ಅಲೋಕ್‌ ವರ್ಮಾ ವಿರುದ್ಧ ಅಗತ್ಯ ಶಿಸ್ತು ಕ್ರಮಕೈಗೊಳ್ಳುವಂತೆ ಸೂಚಿಸಿದೆ‘ ಎಂದು ಅವರು ಹೇಳಿದ್ದಾರೆ.

ಡಿಒಪಿಟಿ ಇಲಾಖೆಯು ಗೃಹ ಸಚಿವಾಲಯದ ಈ ಶಿಫಾರಸನ್ನು ಐಪಿಎಸ್‌ ಅಧಿಕಾರಿಗಳ ನೇಮಕಾತಿ ಸಂಸ್ಥೆಯಾದ ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್‌ಸಿ) ರವಾನಿಸಿದೆ ಎಂದು ಅವರು ಹೇಳಿದ್ದಾರೆ.

ಒಂದೊಮ್ಮೆ ಗೃಹ ಸಚಿವಾಲಯದ ಈ ಕ್ರಮ ಅನುಮೋದನೆಗೊಂಡರೆ, ವರ್ಮಾ ಅವರ ಪಿಂಚಣಿ ಮತ್ತು ನಿವೃತ್ತಿಯ ನಂತರ ದೊರೆಯುವ ಸೌಲಭ್ಯಗಳನ್ನು ತಾತ್ಕಾಲಿಕ ಅಥವಾ ಶಾಶ್ವತವಾಗಿ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ.

1979-ಬ್ಯಾಚ್‌ನ (ನಿವೃತ್ತ) ಐಪಿಎಸ್ ಅಧಿಕಾರಿ ವರ್ಮಾ, 2018ರಲ್ಲಿ ಸಿಬಿಐನಲ್ಲಿ ನಿರ್ದೇಶಕರಾಗಿದ್ದ ವೇಳೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಗುಜರಾತ್-ಕೇಡರ್ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾ ಅವರೊಂದಿಗೆ ಸಂಘರ್ಷ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT