ಶುಕ್ರವಾರ, ನವೆಂಬರ್ 27, 2020
18 °C

ಹಾಂಗ್‌ಕಾಂಗ್‌: ಏರ್‌ ಇಂಡಿಯಾಕ್ಕೆ ನಿರ್ಬಂಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೆಲ ಪ್ರಯಾಣಿಕರಲ್ಲಿ ಕೋವಿಡ್‌–19 ದೃಢಪಟ್ಟ ಕಾರಣ ನವೆಂಬರ್‌ 10ರವರೆಗೆ ಏರ್‌ ಇಂಡಿಯಾ ವಿಮಾನಗಳಿಗೆ ಹಾಂಗ್‌ಕಾಂಗ್‌ ನಿರ್ಬಂಧ ಹೇರಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಿಂದ ಹಾಂಗ್‌ ಕಾಂಗ್‌ಗೆ ಏರ್‌ ಇಂಡಿಯಾ ವಿಮಾನದಲ್ಲಿ ತೆರಳಿದ್ದ ಕೆಲ ಪ್ರಯಾಣಿಕರಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕೋವಿಡ್‌ ಪ್ರಾರಂಭವಾದ ದಿನದಿಂದ ಈವರೆಗೆ ಏರ್‌ ಇಂಡಿಯಾ ವಿಮಾನಗಳಿಗೆ ನಾಲ್ಕು ಬಾರಿ ನಿರ್ಬಂಧ ವಿಧಿಸಲಾಗಿದೆ.

ಈ ಹಿಂದೆ ಸೆಪ್ಟೆಂಬರ್ 2ರಿಂದ ಅಕ್ಟೋಬರ್‌ 3, ಆಗಸ್ಟ್‌ 18ರಿಂದ 31 ಮತ್ತು ಅಕ್ಟೋಬರ್‌ 17ರಿಂದ
30ರವರೆಗೆ ಏರ್‌ ಇಂಡಿಯಾ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

ಭಾರತದಿಂದ ಬರುವ ಪ್ರಯಾಣಿಕರು 72 ಗಂಟೆಗಳ ಮೊದಲು ಕೋವಿಡ್‌ ನೆಗೆಟಿವ್‌ ಇರುವ ಪ್ರಮಾಣ ಪತ್ರವನ್ನು ಪಡೆದಿರಬೇಕು ಎಂದು ಹಾಂಗ್‌ಕಾಂಗ್‌ ಸರ್ಕಾರ ಜುಲೈ ತಿಂಗಳಲ್ಲಿ ಪ್ರಕಟಿಸಿದ ಮಾರ್ಗಸೂಚಿಯಲ್ಲಿ ತಿಳಿಸಿದೆ. ಹಾಂಗ್‌ಕಾಂಗ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರವೂ, ಅವರು ಕೋವಿಡ್‌–19 ಪರೀಕ್ಷೆಗೆ ಒಳಪಡುವುದು ಕಡ್ಡಾಯವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು