ಆಗ್ರಾ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬ ತನ್ನ ಸೋದರ ಮಾವನನ್ನೇ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ರೋಹ್ತಾ ಪ್ರದೇಶದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನುರಾಜ್ ಕುಮಾರ್ (25) ಎಂದು ಗುರುತಿಸಲಾಗಿದೆ. 10 ತಿಂಗಳ ಹಿಂದೆ ಹುಡುಗಿಯ ಮನೆಯವರ ತೀವ್ರ ವಿರೋಧದ ನಡುವೆಯೂ ರಾಜ್ ಕುಮಾರ್, ಆರೋಪಿ ಶಿವಶಂಕರ್ ಅವರ ಸಹೋದರಿ ರಮಾ ಅವರನ್ನು ಮದುವೆಯಾಗಿದ್ದರು. ಈಗ ರಮಾ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದಾರೆ.
‘ರಮಾ ಅವರ ಸಹೋದರನಿಗೆ ತನ್ನ ಸೋದರಮಾವನ ಮೇಲೆ ಅಪಾರ ದ್ವೇಷವಿತ್ತು. ಈ ಕಾರಣದಿಂದಲೇ ಸಹೋದರಿಯನ್ನು ಭೇಟಿಯಾಗಲು ಮನೆಗೆ ಬಂದಿದ್ದ ರಾಜ್ ಕುಮಾರ್‌ನನ್ನು ಆರೋಪಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ’ ಎಂದು ಪೊಲೀಸ್ ಅಧಿಕಾರಿ ನೀರಜ್ ಕುಮಾರ್ ಹೇಳಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.