ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಬಟ್ಟಿ ದುರಂತ: ಬಿಹಾರದ ಮತ್ತೆರಡು ಜಿಲ್ಲೆಗಳಲ್ಲಿ ಎಂಟು ಮಂದಿ ಸಾವು

Last Updated 17 ಡಿಸೆಂಬರ್ 2022, 14:02 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ಸಾರಣ್‌ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ದುರಂತದಲ್ಲಿ 30 ಮಂದಿ ಮೃತಪಟ್ಟಿರುವ ಬೆನ್ನಲ್ಲೇ, ಇತರ ಎರಡು ಜಿಲ್ಲೆಗಳಲ್ಲೂ ಕಳ್ಳಬಟ್ಟಿ ಸಾರಾಯಿ ಸೇವಿಸಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸಿವಾನ್‌ ಜಿಲ್ಲೆಯಲ್ಲಿ ಆರು ಮಂದಿ ಹಾಗೂ ಬೇಗುಸರೈ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದೂ ವಿವರಿಸಿದ್ದಾರೆ.

ಸಾರಣ್‌ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ದುರಂತದಲ್ಲಿ 60 ಮಂದಿ ಮೃತಪಟ್ಟಿದ್ದಾರೆ ಎಂದು ದೃಢೀಕರಿಸದ ಮೂಲಗಳು ತಿಳಿಸಿವೆ. ಆದರೆ 30 ಜನರಷ್ಟೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

‘ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುವುದನ್ನು ಪತ್ತೆ ಹಚ್ಚಲು ಶೋಧ ಕಾರ್ಯ ಮುಂದುವರಿಸಿದ್ದೇವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಬೇಗುಸರೈನಲ್ಲಿ ಇಬ್ಬರು ಯುವಕರು ವಿಷಕಾರಿ ರಾಸಾಯನಿಕ ಸೇವಿಸಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಯುತ್ತಿದೆ’ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT