ಶನಿವಾರ, ಜನವರಿ 29, 2022
18 °C

ವಾಯುಪಡೆಯ ಹೆಲಿಕಾಪ್ಟರ್ ಪತನ: ರಾವತ್ ಸೇರಿ ಎಲ್ಲರ ಸುರಕ್ಷತೆಗೆ ರಾಹುಲ್ ಪ್ರಾರ್ಥನೆ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯಲ್ಲಿ (ಕೂನೂರು) ಪತನಗೊಂಡಿದ್ದು, ಸೇನಾಪಡೆ ಮುಖ್ಯಸ್ಥರು ಸೇರಿ ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಾರ್ಥಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಹೆಲಿಕಾಪ್ಟರ್‌ನಲ್ಲಿದ್ದ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರರು ಸುರಕ್ಷಿತವಾಗಿದ್ದಾರೆ ಎಂದು ಭಾವಿಸುತ್ತೇನೆ. ಗಾಯಗೊಂಡಿರುವವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್‌ ಪತನಗೊಂಡಿದ್ದು, ತುರ್ತು ರಕ್ಷಣಾ ಪಡೆಗಳು ಸ್ಥಳದಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಂಡಿರುವುದಾಗಿ ಐಎಎಫ್ ತಿಳಿಸಿದೆ.

ಇದನ್ನೂ ಓದಿ: 

ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ಇನ್ನುಳಿದವರ ಶೋಧಕಾರ್ಯ ನಡೆಯುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಜನರಲ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್. ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯ್ಕ್ ಗುರ್ಸೇವಕ್ ಸಿಂಗ್, ನಾಯ್ಕ್ ಜಿತೇಂದರ್ ಕುಮಾರ್, ನಾಯ್ಕ್ ವಿವೇಕ್ ಕುಮಾರ್, ನಾಯ್ಕ್ ಬಿ ಸಾಯಿ ತೇಜ, ಹವಲ್ದಾರ್ ಸತ್ಪಾಲ್ ಮತ್ತು ಪೈಲಟ್‌ಗಳು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು