ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ಲಾಕ್‌ಡೌನ್‌ ವಿರೋಧಿಸಿ ಹೋಟೆಲ್‌ ಉದ್ಯಮಿಗಳ ಪ್ರತಿಭಟನೆ

Last Updated 8 ಏಪ್ರಿಲ್ 2021, 16:08 IST
ಅಕ್ಷರ ಗಾತ್ರ

ಮುಂಬೈ: ಕೋವಿಡ್‌ ಸೋಂಕು ಪ್ರಕರಣಗಳ ತೀವ್ರ ಏರಿಕೆ ಹಿನ್ನೆಲೆಯಲ್ಲಿ ನಿಯಂತ್ರಣ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಮುಂಬೈನಲ್ಲಿ ವಾರಾಂತ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲು ನಿರ್ಧರಿಸಿರುವುದನ್ನು ವಿರೋಧಿಸಿ ಹೋಟೆಲ್‌ ಉದ್ಯಮಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೂ ಲಾಕ್‌ಡೌನ್‌ ಮಾಡಲು ಸರ್ಕಾರ ನಿರ್ಧರಿಸಿರುವುದನ್ನು ಹೋಟೆಲ್‌ ಉದ್ಯಮಿಗಳು ವಿರೋಧಿಸಿದ್ದಾರೆ.

ಕಠಿಣ ಕ್ರಮಗಳಲ್ಲಿ ಕೆಲವು ರಿಯಾಯಿತಿ ನೀಡುವಂತೆ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಾರದ ದಿನಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 8ರವರೆಗೂ ಮಾತ್ರ ಆಹಾರ ಸರಬರಾಜು ಮಾಡುವ ನಿಯಮ ಹಾಗೂ ಆಹಾರ ಸರಬರಾಜು ಮಾಡುವ ಹುಡುಗರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ (15 ದಿನಕ್ಕೆ ಒಮ್ಮೆ)ವನ್ನು ತೆಗೆದು ಹಾಕುವಂತೆ ಅವರು ಮನವಿ ಮಾಡಿದ್ದಾರೆ.

ಮುಂಬೈನ ಬಹುತೇಕ ಹೋಟೆಲ್‌ಗಳ ಮುಂದೆ ಗುರುವಾರ 12 ಗಂಟೆ ಸುಮಾರಿಗೆ ಹೋಟೆಲ್‌ ಮಾಲೀಕರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT