ಶನಿವಾರ, ಮೇ 28, 2022
22 °C

ವಾಯುವ್ಯ, ಮಧ್ಯ ಭಾರತದಲ್ಲಿ 122 ವರ್ಷಗಳಲ್ಲೇ ಬಿರುಬೇಸಿಗೆಯ ಏಪ್ರಿಲ್: ಐಎಂಡಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ 122 ವರ್ಷಗಳಲ್ಲೇ ಏಪ್ರಿಲ್ ತಿಂಗಳಲ್ಲಿ ಅತ್ಯಂತ ಬಿರು ಬೇಸಿಗೆಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರಾಸರಿ ಗರಿಷ್ಠ ತಾಪಮಾನ ಕ್ರಮವಾಗಿ 35.9 ಮತ್ತು 37.78 ಡಿಗ್ರಿ ಸೆಲ್ಸಿಯಸ್ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ, ದೇಶದ ವಾಯುವ್ಯ ಮತ್ತು ಪಶ್ಚಿಮ ಮಧ್ಯ ಭಾಗಗಳಾದ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದಲ್ಲಿ ಮೇ ತಿಂಗಳಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಅಧಿಕ ತಾಪಮಾನ ಮುಂದುವರಿಯುತ್ತದೆ ಎಂದು ಹೇಳಿದರು.

ದಕ್ಷಿಣದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಭಾಗಗಳಲ್ಲಿ ಮೇ ತಿಂಗಳಲ್ಲಿ ರಾತ್ರಿಗಳು ಅತ್ಯಂತ ಬಿಸಿಯಿಂದ ಕೂಡಿರುತ್ತದೆ ಎಂದು ಮೊಹಾಪಾತ್ರ ಹೇಳಿದರು.

ಏಪ್ರಿಲ್‌ನಲ್ಲಿ ಭಾರತದ ಸರಾಸರಿ ತಾಪಮಾನವು 35.05 ಡಿಗ್ರಿಗಳಾಗಿದ್ದು, ಇದು 122 ವರ್ಷಗಳಲ್ಲೇ ನಾಲ್ಕನೇ ಅತಿ ಹೆಚ್ಚು ಉಷ್ಣಾಂಶ ಎಂದು ಅವರು ಹೇಳಿದರು.

‘ದೇಶದಾದ್ಯಂತ ಮೇ 2022 ರ ಸರಾಸರಿ ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ’ಎಂದು ಮೊಹಾಪಾತ್ರ ಹೇಳಿದರು.

ಆದರೂ, ವಾಯುವ್ಯ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳು ಮತ್ತು ಆಗ್ನೇಯ ಭಾಗದಲ್ಲಿ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು