ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಲಸಿಕೆ ಬೆಲೆ ನಿಗದಿ: ಇಲ್ಲಿದೆ ದರ ಪಟ್ಟಿ

Last Updated 8 ಜೂನ್ 2021, 17:04 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳು ಗರಿಷ್ಠ ₹150 ಸೇವಾ ಶುಲ್ಕ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಸೋಮವಾರ ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಜೂನ್‌ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಘೋಷಿಸಿದ್ದರು. ಜತೆಗೆ, ಲಸಿಕೆ ನೀಡಿಕೆಗೆ ಖಾಸಗಿ ಆಸ್ಪತ್ರೆಗಳು ಪಡೆಯುವ ಶುಲ್ಕವನ್ನು ಪರಿಷ್ಕರಿಸಿ ಘೋಷಣೆ ಮಾಡಿದ್ದರು.

ಸೇವಾ ಶುಲ್ಕ ಪರಿಷ್ಕರಣೆ (₹150 + ಶೇ 5 ಜಿಎಸ್‌ಟಿ) ಬಳಿಕ ದೇಶದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ಲಸಿಕೆಯ ಒಂದು ಡೋಸ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ.

* ಕೋವಿಶೀಲ್ಡ್ – ₹780

* ಕೊವ್ಯಾಕ್ಸಿನ್ – ₹1,410

* ಸ್ಪುಟ್ನಿಕ್ ವಿ – ₹1,145

ಹೆಚ್ಚು ದರ ವಸೂಲಿ ಮಾಡಿದರೆ ಕಠಿಣ ಕ್ರಮ

ಪರಿಷ್ಕೃತ ದರಕ್ಕೆ ಸಂಬಂಧಿಸಿ ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಪತ್ರ ಬರೆದಿದ್ದು, ಖಾಸಗಿ ಆಸ್ಪತ್ರೆಗಳು ಹೆಚ್ಚು ದರ ಪಡೆದರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ವಿವಿಧ ಖಾಸಗಿ ಆಸ್ಪತ್ರೆಗಳ ದರ ಗರಿಷ್ಠ ಮಿತಿಯನ್ನು ಮೀರದಂತೆ ನೋಡಿಕೊಳ್ಳಬೇಕೆಂದೂ ಆರೋಗ್ಯ ಸಚಿವಾಲಯ ಹೇಳಿದೆ.

ಖಾಸಗಿ ಆಸ್ಪತ್ರೆಗಳು ಗರಿಷ್ಠ ₹150 ಸೇವಾ ಶುಲ್ಕ ಪಡೆಯಬಹುದು. ಈ ರೀತಿ ವಿಧಿಸಲಾಗುವ ಬೆಲೆಯ ಬಗ್ಗೆ ರಾಜ್ಯ ಸರ್ಕಾರಗಳು ಮೇಲ್ವಿಚಾರಣೆ ನಡೆಸಬಹುದು ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT