ಶನಿವಾರ, ಮೇ 28, 2022
31 °C

ಕೋವಿಡ್ ಶಂಕಿತ ಪ್ರಕರಣವೆಂದು ಪರಿಗಣಿಸಲು ಕೇಂದ್ರ ಸೂಚಿಸಿದ ಮಾನದಂಡವಿದು...

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್–19 ಶಂಕಿತ ಪ್ರಕರಣವೆಂದು ಪರಿಗಣಿಸಲು ಯಾವ ಮಾನದಂಡ ಅನುಸರಿಸಬೇಕು ಎಂಬುದನ್ನು ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಯಾವುದೇ ವ್ಯಕ್ತಿಯು ಕೆಮ್ಮು, ತಲೆನೋವು, ಗಂಟಲು ಕೆರೆತ, ಉಸಿರಾಟ ಸಮಸ್ಯೆ, ಮೈ-ಕೈ ನೋವು, ರುಚಿ ಮತ್ತು ವಾಸನಾ ಶಕ್ತಿ ಕಳೆದುಕೊಂಡಿರುವುದು, ಆಯಾಸ, ಅತಿಸಾರದೊಂದಿಗೆ ಜ್ವರ ಹೊಂದಿದ್ದರೆ ಅಥವಾ ಈ ಲಕ್ಷಣಗಳಿಲ್ಲದೇ ಜ್ವರದಿಂದ ಬಳಲುತ್ತಿದ್ದರೆ, ಇದು ಬೇರೆ ಯಾವುದೇ ಸೋಂಕು ಅಲ್ಲ ಎಂಬುದು ಖಚಿತವಾದರೆ ಶಂಕಿತ ಕೋವಿಡ್ ಪ್ರಕರಣವೆಂದು ಪರಿಗಣಿಸಬೇಕು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ವಿವಿಧ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ತೆರೆಯುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಕೇಂದ್ರದ (ಐಸಿಎಂಆರ್) ನಿರ್ದೇಶಕ ಡಾ.ಬಲರಾಂ ಭಾರ್ಗವ ಪತ್ರ ಬರೆದಿದ್ದಾರೆ. ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಯನ್ನು ಸಿದ್ಧರಾಗಿರುವಂತೆ ನೋಡಿಕೊಳ್ಳಲು ಮತ್ತು ಮನೆಯಲ್ಲೇ ಪರೀಕ್ಷೆ ಮಾಡುವಂಥ ಕಿಟ್‌ಗಳ ಬಳಕೆಗೆ ಉತ್ತೇಜನ ನೀಡುವಂತೆಯೂ ಪತ್ರದಲ್ಲಿ ಸೂಚಿಸಲಾಗಿದೆ ಎಂದು ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಇದನ್ನೂ ಓದಿ: 

ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್‌ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಈ ಸೂಚನೆ ನೀಡಿದೆ.

ಇದನ್ನೂ ಓದಿ: 

ಭಾರತದಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 309 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಸೋಂಕಿತರಾದವರ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ. 374 ಮಂದಿ ಸೋಂಕಿತರು ಈವರೆಗೆ ಚೇತರಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು