ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿಯವರಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣ:ಮಾರ್ಚ್‌ ಅಂತ್ಯಕ್ಕೆ ಪ್ರಕ್ರಿಯೆ ಪೂರ್ಣ?

Last Updated 26 ಅಕ್ಟೋಬರ್ 2021, 21:00 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ರಾಷ್ಟ್ರದ 13 ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಯನ್ನು ಮುಂದಿನ ಮಾರ್ಚ್‌ ತಿಂಗಳೊಳಗೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಖಾಸಗಿ ಮತ್ತು ಸಾರ್ವಜನಿಕ ವಲಯದ ಸಹಭಾಗಿತ್ವ (ಪಿಪಿಪಿ)ದ ಆಧಾರದಲ್ಲಿ ನಿರ್ವಹಣೆಗೆ ಒಳಪಡಲಿರುವ ಒಟ್ಟು 13 ವಿಮಾನ ನಿಲ್ದಾಣಗಳ ಪಟ್ಟಿಯನ್ನು ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಿಕೊಡಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಅಂತ್ಯದ ವೇಳೆಗೆ ಅವುಗಳ ಖಾಸಗೀಕರಣಕ್ಕಾಗಿ ಹರಾಜು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ)ದ ಅಧ್ಯಕ್ಷ ಸಂಜೀವ್ ಕುಮಾರ್ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪ್ರತಿ ಪ್ರಯಾಣಿಕರಿಂದ ಬರುವ ಆದಾಯವನ್ನು ಆಧರಿಸಿದ ಹರಾಜು ಪ್ರಕ್ರಿಯೆಯ ಮಾದರಿ ಅಡಿ ಈ ಎಲ್ಲ ವಿಮಾನ ನಿಲ್ದಾಣಗಳ ನಿರ್ವಹಣೆಯ ಹೊಣೆಯನ್ನು 50 ವರ್ಷಗಳ ಅವಧಿಗೆ ಖಾಸಗಿಯವರಿಗೆ ವಹಿಸಲು ನಿರ್ಧರಿಸಲಾಗಿದೆ. ಈಗಾಗಲೇ ಉತ್ತರ ಪ್ರದೇಶದ ಗ್ರೇಟರ್‌ ನೊಯ್ಡಾದಲ್ಲಿನ ಜೆವಾರ್ ವಿಮಾನ ನಿಲ್ದಾಣವನ್ನೂ ಅದೇ ಮಾದರಿಯ ನಿರ್ವಹಣೆಗೆ ವಹಿಸಲಾಗಿದ್ದು, ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ.

ಈ 13ರ ಪೈಕಿ ಏಳು ಸಣ್ಣ ವಿಮಾನ ನಿಲ್ದಾಣಗಳನ್ನು ದೊಡ್ಡ ವಿಮಾನಗಳೊಂದಿಗೆ ಜೋಡಣೆ ಮಾಡಲು ನಿರ್ಧರಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT