ಶನಿವಾರ, ಮೇ 28, 2022
27 °C

ಭಾರಿ ಪ್ರಮಾಣದ ಶಸ್ತ್ರಾಸ್ತ್ರ,ಮದ್ದುಗುಂಡು ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರು ಎಂಬ ಪ್ರದೇಶದ ಬಳಿ ವಾಹನದಲ್ಲಿ ಬಿಟ್ಟು ಹೋಗಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಮಂಗಳವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

‘ದೂರು ಪ್ರದೇಶದ ಮೆಹಮೂದ್ ಅಬಾದ್ ಸೇತುವೆಯ ಬಳಿ ಗಸ್ತಿನಲ್ಲಿದ್ದ ಪೊಲೀಸರನ್ನು ಕಂಡ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ. ಚಾಲಕನ ಸೆರೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಲಾಯಿತಾದರೂ ಕತ್ತಲು ಕವಿದಿದ್ದರಿಂದ ಆತ ತಪ್ಪಿಸಿಕೊಂಡ. ನಂತರ ವಾಹನ ತಪಾಸಣೆ ನಡೆಸಿದಾಗ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಸಾಗಿಸುತ್ತಿರುವುದು ಪತ್ತೆಯಾಯಿತು’ ಎಂದು ಪೊಲೀಸರು ತಿಳಿಸಿದರು.

‘ವಾಹನದಲ್ಲಿದ್ದ ಒಂದು ಎಕೆ 56 ಬಂದೂಕು, ಎರಡು ಪಿಸ್ತೂಲ್‌, ಎರಡು ಎಕೆ ಮ್ಯಾಗಜೀನ್‌, ಮೂರು ಪಿಸ್ತೂಲ್‌ ಮ್ಯಾಗಜೀನ್‌, ಆರು ಹ್ಯಾಂಡ್‌ ಗ್ರೆನೆಡ್‌, ಎಕೆ–47 ಬಂದೂಕಿನ 44 ಗುಂಡುಗಳು ಹಾಗೂ 7.9 ಮಿ.ಮಿ ಗಾತ್ರದ 58 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.