ಬುಧವಾರ, ಆಗಸ್ಟ್ 10, 2022
21 °C

ಗುಜರಾತ್‌: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ವಡೋದರ: ಗುಜರಾತ್‌ನ ಅಗರಬತ್ತಿ ಕಾರ್ಖಾನೆಯೊಂದರಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

‘ಮಕರಪುರ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀಜೀ ಅಗರಬತ್ತಿ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿತು. ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ರಾಸಾಯನಿಕಗಳಿಂದಾಗಿ ಬೆಂಕಿ ವೇಗವಾಗಿ ಹರಡಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 4.30ಕ್ಕೆ ಕರೆ ಬಂತು. ನಾವು ಘಟನಾ ಸ್ಥಳ ತಲುಪುವುದಕ್ಕೂ ಮೊದಲೇ ಪೂರ್ತಿ ಕಾರ್ಖಾನೆಯನ್ನು ಬೆಂಕಿ ಆವರಿಸಿತ್ತು. ಗೋದಾಮು ಪ್ರವೇಶಿಸಲು ಸರಿಯಾದ ಮಾರ್ಗ ಕೂಡ ಇರಲಿಲ್ಲ’ ಎಂದು ಅಗ್ನಿಶಾಮಕ ಅಧಿಕಾರಿ ನಿಕುಂಜ್ ಆಜಾದ್ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ... ವರ್ಷದಲ್ಲಿ ಮೊದಲ ಬಾರಿಗೆ ಪೆಟ್ರೋಲ್‌ ದರ 18 ಪೈಸೆ, ಡೀಸೆಲ್‌ 17 ಪೈಸೆ ಇಳಿಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು