ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮಳೆಯ ಅಬ್ಬರ: ವಿಮಾನ ಸಂಚಾರ ವ್ಯತ್ಯಯ

ಅಕ್ಷರ ಗಾತ್ರ

ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾನುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯವಸ್ತವಾಗಿದೆ.ಪ್ರತಿ ಗಂಟೆಗೆ 70 ಕಿ. ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯ ಜೊತೆಗೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಮತ್ತು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಅಲ್ಲದೆ, ಸೋಮವಾರ ಬೆಳಿಗ್ಗೆ 5.40 ಗಂಟೆಯಿಂದ ಬೆಳಗ್ಗೆ 7 ಗಂಟೆ ಮಧ್ಯೆ ತಾಪಮಾನವು29 ಡಿಗ್ರಿ ಸೆಲ್ಸಿಯಸ್ ನಿಂದ 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.ತಾಪಮಾನವು 11 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ ಕಂಡಿದೆ.

ಪ್ರತಿಕೂಲ ಹವಾಮಾನದ ಕಾರಣ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ವಿಮಾನ ಸಂಚಾರದ ಕೊನೆ ಕ್ಷಣದ ಮಾಹಿತಿಗಾಗಿ ಪ್ರಯಾಣಿಕರು ವಿಮಾನಯಾನ ಸಂಸ್ಥೆಗಳ ಜತೆ ಸಂಪರ್ಕದಲ್ಲಿರಿ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಗಾಜಿಯಾಬಾದ್, ಹಿಂಡಾನ್ ವಾಯುನೆಲೆ, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುಂದುವರಿಯಲಿದೆ ಎಂದು ಸೋಮವಾರ ಮುಂಜಾನೆ ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ. ನಗರದ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT