ಬುಧವಾರ, ಮಾರ್ಚ್ 22, 2023
19 °C

ಸ್ಟ್ಯಾನ್‌ ಸ್ವಾಮಿ ಅವರಿಗೆ 2ನೇ ಬಾರಿಯೂ ಸಿಗದ ಜಾಮೀನು

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಸ್ಟ್ಯಾನ್‌ ಸ್ವಾಮಿ ಅವರು ಮಧ್ಯಂತರ ಜಾಮೀನು ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರಿಗೆ ಜಾಮೀನು ನೀಡಬಾರದು ಎಂದು ಎನ್‌ಐಎ ವಾದಿಸಿತ್ತು.

‘ಜೈಲಿನಲ್ಲಿ ವೈದ್ಯಕೀಯ ಸವಲತ್ತು ಇಲ್ಲ. ನಾನು ದಿನೇ ದಿನೇ ಸಾಯುತ್ತಿದ್ದೇನೆ. ಜಾಮೀನು ದೊರೆಯದಿದ್ದರೆ ನಾನು ಇಲ್ಲೇ ಸತ್ತು ಹೋಗುತ್ತೇನೆ’ ಎಂದು ಹಿಂದಿನ ವಿಚಾರಣೆ ವೇಳೆ ಸ್ಟ್ಯಾನ್‌ ಸ್ವಾಮಿ ಹೇಳಿದ್ದರು.

‘ಯಾವುದೇ ಕಾರಣಕ್ಕೂ ಅವರಿಗೆ ಜಾಮೀನು ನೀಡಬಾರದು’ ಎಂದು ಎನ್‌ಐಎ ಪ್ರತಿಪಾದಿಸಿತ್ತು. ಹೀಗಾಗಿ ಹೈಕೋರ್ಟ್‌ ಅರ್ಜಿ ತಿರಸ್ಕರಿಸಿತ್ತು. ಸ್ಟ್ಯಾನ್‌ ಸ್ವಾಮಿ ಪರ ವಕೀಲ ಮಿಹಿರ್ ದೇಸಾಯಿ, ಅನಾರೋಗ್ಯದ ಕಾರಣ ಮುಂದಿಟ್ಟು ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರವಷ್ಟೇ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

ಸ್ಟಾನ್ ಸ್ವಾಮಿ ಅವರ ಕಸ್ಟಡಿ ಸಾವನ್ನೂ ತನಿಖೆಗೆ ಒಳಪಡಿಸಲಾಗುತ್ತದೆ ಹೈಕೋರ್ಟ್‌ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು