ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿ 22ಕ್ಕೆ ‘ಹುನಾರ್‌ ಹಾತ್‌’ ಅಭಿಯಾನಕ್ಕೆ ಚಾಲನೆ

Last Updated 20 ಜನವರಿ 2021, 13:55 IST
ಅಕ್ಷರ ಗಾತ್ರ

ನವದೆಹಲಿ: ನುರಿತ ಕುಶಲಕರ್ಮಿಗಳಿಗೆ ಉದ್ಯೋಗ ಅವಕಾಶ ಸೃಷ್ಟಿಸುವ ಸಲುವಾಗಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವಾಲಯ ಆರಂಭಿಸಿರುವ ‘ಹುನಾರ್‌ ಹಾತ್‌’ ಅಭಿಯಾನಕ್ಕೆ ಇದೇ22ರಂದು ಚಾಲನೆ ನೀಡಲಾಗುತ್ತದೆ.

‘ಲಖನೌದಲ್ಲಿ ಜನವರಿ22ರಿಂದ ಫೆಬ್ರುವರಿ4ರವರೆಗೆ ಕಾರ್ಯಕ್ರಮ ಆಯೋಜನೆಯಾಗಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಇದೇ23ರಂದು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ’ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

‘ದೇಶೀಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಅವಧ್‌ನ ಶಿಲ್ಪಗ್ರಾಮದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. 31 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 500 ಕುಶಲಕರ್ಮಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದೂ ಪ್ರಕಟಣೆ ಹೇಳಿದೆ.

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಮುಕ್ತಾರ್‌‌ ಅಬ್ಬಾಸ್‌ ನಖ್ವಿ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್‌ ಮೌರ್ಯ ಹಾಗೂ ದಿನೇಶ್‌ ಶರ್ಮಾ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಮುಖ್ಯಸ್ಥ ವಿ.ಕೆ.ಸಕ್ಸೇನಾ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT