ಶನಿವಾರ, ಸೆಪ್ಟೆಂಬರ್ 18, 2021
21 °C

ಹೈದರಾಬಾದ್‌: ಹೆಂಡತಿ ಬಿಟ್ಟಿದ್ದಕ್ಕೆ 18 ಮಹಿಳೆಯರ ಕೊಲೆ?! ಸರಣಿ ಹಂತಕ ಸೆರೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: 18 ಮಹಿಳೆಯರ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ 45 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಮಹಿಳೆಯರ ಎರಡು ಹತ್ಯೆ ಪ್ರಕರಣಗಳ ಕುರಿತು ತನಿಖೆ ನಡೆಸುವ ವೇಳೆ ಆರೋಪಿಯು ಹಿಂದಿನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಇದೇ ಆರೋಪಿಯನ್ನು 21 ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ 16 ಕೊಲೆ ಪ್ರಕರಣ, 4 ಆಸ್ತಿ ಸಂಬಂಧಿತ ಐದು ಆಸ್ತಿ ಸಂಬಂಧಿತ ಅಪರಾಧ ಪ್ರಕರಣಗಳು ಸೇರಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ 21ನೇ ವಯಸ್ಸಿನಲ್ಲಿ ಮದುವೆಯಾಗಿದ್ದ. ಆದರೆ, ಆತನ ಪತ್ನಿ ಕೆಲವೇ ದಿನಗಳಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಓಡಿಹೋಗಿದ್ದಳು. ಅಂದಿನಿಂದ ‌ಆತ ಮಹಿಳೆಯರ ವಿರುದ್ಧ ದ್ವೇಷ ಸಾಧಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ.

ಆರೋಪಿ 2003ರಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು