ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ನಾಗರಿಕರ ಹತ್ಯೆ ಪ್ರಕರಣ, ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ

Last Updated 18 ನವೆಂಬರ್ 2021, 12:56 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಹೈದರ್‌ಪೋರಾದಲ್ಲಿಈಚೆಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ನಾಗರಿಕರು ಸೇರಿ ನಾಲ್ವರು ಮೃತಪಟ್ಟ ಘಟನೆಗೆ ಕೇಂದ್ರಾಡಳಿತ ಪ್ರದೇಶದಾದ್ಯಂತಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಗುರುವಾರ ಲೆಫ್ಟಿಂನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಮನೋಜ್‌ ಸಿನ್ಹಾ, ಹೈದರ್‌ಪೋರಾ ಎನ್‌ಕೌಂಟರ್‌ ಪ್ರಕರಣವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ನಿಗದಿತ ಕಾಲಮಿತಿಯೊಳಗೆ ತನಿಖೆ ನಡೆಸಲು ಆದೇಶಿಸಲಾಗಿದ್ದು, ವರದಿ ಬಂದ ಬಳಿಕ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಜಮ್ಮು ಕಾಶ್ಮೀರದ ನಾಗರಿಕರ ಜೀವ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶ್ರೀನಗರದ ಹೊರವಲಯದ ಹೈದರ್‌ಪೋರಾದಲ್ಲಿ ನ.15ರಂದು ನಡೆದ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಉದ್ಯಮಿ, ವೈದ್ಯರೊಬ್ಬರು ಸೇರಿ ನಾಲ್ವರು ಬಲಿಯಾಗಿದ್ದರು. ಉಗ್ರವಾದದ ಹೆಸರಿನಲ್ಲಿ ಭದ್ರತಾಪಡೆಗಳು ನಾಗರಿಕರನ್ನು ಕೊಲ್ಲುತ್ತಿದ್ದು, ಸರ್ಕಾರ ನಾಗರಿಕರ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಹಾಗೂ ಸಂಸದ ಫಾರೂಕ್‌ ಅಬ್ದುಲ್ಲಾ ಅವರು ಬುಧವಾರ ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT