ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಧ್ವನಿಗಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ: ರಾಹುಲ್ ಗಾಂಧಿ

Last Updated 24 ಮಾರ್ಚ್ 2023, 13:08 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯಾವುದೇ ಬೆಲೆ ತೆರಲು ಸಿದ್ಧ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಭಾರತದ ಧ್ವನಿಗಾಗಿ ನಾನು ಹೋರಾಡುತ್ತಿದ್ದೇನೆ. ಯಾವುದೇ ಬೆಲೆ ತೆರಲು ಸಿದ್ಧವಾಗಿದ್ದೇನೆ' ಎಂದು ತಿಳಿಸಿದ್ದಾರೆ.

ಮಾರ್ಚ್ 23ರಂದು ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ (ಇಂದು) ಅಧಿಸೂಚನೆ ಹೊರಡಿಸಿದೆ.

ಇವನ್ನೂ ಓದಿ:

ಅಂದು ಕೋಲಾರದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?







ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT