ಮುಂಬೈ: ಹಲವು ಪಕ್ಷಗಳು ಬೆಂಬಲ ನೀಡುತ್ತಿರುವುದರ ಹೊರತಾಗಿಯೂ ತಾವು ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದುಎನ್ಸಿಪಿ ನಾಯಕಶರದ್ ಪವಾರ್ ಹೇಳಿರುವುದಾಗಿ ವರದಿಯಾಗಿದೆ.

ಎನ್ಸಿಪಿ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಅವರು ಈ ವಿಚಾರ ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಪವಾರ್ ಅವರಿಗೆ ಬೆಂಬಲ ನೀಡುವುದಾಗಿ ಮಹಾರಾಷ್ಟ್ರ ಕಾಂಗ್ರೆಸ್ ಸೋಮವಾರಹೇಳಿತ್ತು.

ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರ ರೂಪಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇದೇ 15ರಂದು ನವದೆಹಲಿಯಲ್ಲಿ ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ. ಸಭೆಗೆ ಬರುವಂತೆ ಎಲ್ಲ ಪ್ರತಿಪಕ್ಷಗಳ ನಾಯಕರಿಗೆ ಅವರು ಶನಿವಾರ ಪತ್ರ ಬರೆದಿದ್ದಾರೆ.

'ಬಿಜೆಪಿ ಎದುರು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು, ಮಮತಾ ಬ್ಯಾನರ್ಜಿ ಅವರ ಪ್ರಯತ್ನಗಳಿಗೆ ಪವಾರ್ ಬಲ ತುಂಬಲಿದ್ದಾರೆ' ಎಂದು ಎನ್ಸಿಪಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.