ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಝಡ್' ಶ್ರೇಣಿಯ ಭದ್ರತೆ ಬೇಡ; ಯುಎಪಿಎ ಅಡಿಯಲ್ಲಿ ದೂರು ದಾಖಲಿಸಿ: ಓವೈಸಿ

Last Updated 4 ಫೆಬ್ರುವರಿ 2022, 14:00 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದಲ್ಲಿ ತಮ್ಮ ವಾಹನದ ಮೇಲೆ ನಡೆದ ಗುಂಡಿನ ದಾಳಿಯ ಬೆನ್ನಲ್ಲೇ ಕೇಂದ್ರ ಸರ್ಕಾರವು ಒದಗಿಸಿರುವ 'ಝಡ್' ಶ್ರೇಣಿಯ ಭದ್ರತೆಯನ್ನು ತಿರಸ್ಕರಿಸಿರುವ ಆಲ್ ಇಂಡಿಯಾ ಮಜಿಲಿಸ್-ಇ-ಇತ್ಹೇದುಲ್‌ ಮುಸ್ಲೀಮೀನ್ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತಮಗೆನ್ಯಾಯ ಒದಗಿಸಿ ಕೊಡಿ ಎಂದು ಲೋಕಸಭೆಯಲ್ಲಿ ವಿನಂತಿಸಿದ್ದಾರೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟಿಸಿದೆ.

'ನನಗೆ 'ಝಡ್' ಕೆಟಗರಿ ಭದ್ರತೆ ಬೇಡ. ನಾನದನ್ನು ತಿರಸ್ಕರಿಸುತ್ತೇನೆ. ನಾನು ನಿಮಗೆಲ್ಲರಿಗೂ ಸಮಾನವಾಗಿ 'ಎ' ಕೆಟಗರಿಯ ನಾಗರಿಕನಾಗಲು ಬಯಸುತ್ತೇನೆ. ನನ್ನ ಮೇಲೆ ಗುಂಡು ಹಾರಿಸಿದವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಏಕೆ ಪ್ರಕರಣ ದಾಖಲಿಸಿಲ್ಲ' ಎಂದು ಪ್ರಶ್ನಿಸಿದರು.

'ನಾನು ಮಾತನಾಡಲು, ಬದುಕಲು ಬಯಸುತ್ತೇನೆ. ಬಡವರು ಸುರಕ್ಷಿತರಾಗಿದ್ದಾಗ ನನ್ನ ಜೀವನ ಸುರಕ್ಷಿತವಾಗಿರುತ್ತದೆ. ನನ್ನ ಕಾರಿಗೆ ಗುಂಡು ಹಾರಿಸಿದವರ ಬಗ್ಗೆ ನಾನು ಹೆದರುವುದಿಲ್ಲ' ಎಂದು ಸಂಸತ್ತಿನಲ್ಲಿ ಪ್ರತಿಕ್ರಿಯಿಸಿದರು.

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಸಭೆ ಮುಗಿಸಿ ದೆಹಲಿಗೆ ತೆರಳುತ್ತಿದ್ದಾಗ ಓವೈಸಿ ಅವರ ಬೆಂಗಾವಲು ವಾಹನದ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಘಟನೆಯನ್ನು ಖಂಡಿಸಿ ಎಐಎಂಐಎಂ ಪಕ್ಷದ ಕಾರ್ಯಕರ್ತರು ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT