ಗುವಾಹಟಿ: ‘ನಾನು ಗೋಮಾಂಸ ತಿನ್ನುತ್ತೇನೆ. ಆದರೂ ಬಿಜೆಪಿಯಲ್ಲಿದ್ದೇನೆ. ಇದರಿಂದ ಯಾವುದೇ ಸಮಸ್ಯೆಯೂ ಕಾಣಿಸುತ್ತಿಲ್ಲ’ ಎಂದು ಮೇಘಾಲಯದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಹೇಳಿದ್ದಾರೆ.
ಮೇಘಾಲಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿ ಸಂಸ್ಥೆ ಐಎಎನ್‌ಎಸ್ ನಡೆಸಿರುವ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.
ಶೇಕಡ 90ರಷ್ಟು ಕ್ರೈಸ್ತರು ಇರುವ ಮೇಘಾಲಯದಂತಹ ರಾಜ್ಯದಲ್ಲಿ ಜನರು ಗೋಮಾಂಸ ನಿಷೇಧ, ಸಿಎಎ ಮತ್ತು ಇತರ ವಿಷಯಗಳಲ್ಲಿ ಬಿಜೆಪಿಯ ಕಠಿಣ ನಿಲುವುಗಳನ್ನು ಒಪ್ಪಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ನೀವು ನಂಬುತ್ತೀರಾ ಎಂದು ಪ್ರಶ್ನೆ ಕೇಳಲಾಯಿತು.
ಇದಕ್ಕೆ ಉತ್ತರಿಸಿರುವ ಅರ್ನೆಸ್ಟ್ ಮಾವ್ರಿ, ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿದ್ದು, ಯಾವುದೇ ಚರ್ಚ್ ದಾಳಿಗೆ ಒಳಗಾಗಿರುವುದನ್ನು ನಾವು ನೋಡಿಲ್ಲ. ಗೋಮಾಂಸ ಸೇವನೆಗೂ ಯಾವುದೇ ನಿರ್ಬಂಧವಿಲ್ಲ. ನಾನು ಗೋಮಾಂಸ ತಿನ್ನುತ್ತೇನೆ. ನಾನು ಬಿಜೆಪಿಯಲ್ಲೇ ಇದ್ದೇನೆ. ಇದರಿಂದ ಯಾವುದೇ ಸಮಸ್ಯೆಯಾಗಿದ್ದನ್ನು ನಾನು ಕಂಡಿಲ್ಲ. ಮೇಘಾಲಯದ ಜನತೆ ಈ ಬಾರಿ ಬಿಜೆಪಿ ಜೊತೆಗಿದ್ದಾರೆ. ಅದನ್ನು ಮಾರ್ಚ್ 2 ರಂದು ಎಲ್ಲರೂ ನೋಡಲಿದ್ದಾರೆ’ ಎಂದು ಹೇಳಿದ್ದಾರೆ.
ಮೇಘಾಲಯ ವಿಧಾನಸಭೆಗೆ ಫೆಬ್ರುವರಿ 27ರಂದು ಮತದಾನ ನಡೆಯಲಿದೆ. ಮಾರ್ಚ್ 2ರಂದು ಫಲಿತಾಂಶ ಹೊರ ಬೀಳಲಿದೆ. ರಾಜ್ಯದಲ್ಲಿ ಬಿಜೆಪಿಯು ಎನ್‌ಪಿಪಿಯೊಂದಿಗೆ ಮೈತ್ರಿಯನ್ನು ಕಡಿದುಕೊಂಡಿದ್ದು, 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.