ಶನಿವಾರ, ಅಕ್ಟೋಬರ್ 16, 2021
22 °C

ಎರಡು ಬಾರಿ ರಾಜ್ಯಸಭಾ ಸ್ಥಾನ ತಿರಸ್ಕರಿಸಿದ್ದೇನೆ: ನಟ ಸೋನು ಸೂದ್‌  

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ:  ಕೋವಿಡ್ ನಂತರದ ಕಾಲಘಟ್ಟದಲ್ಲಿ ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ ಎಂದು ಬಾಲಿವುಡ್ ನಟ ಸೋನು ಸೂದ್‌ ಅವರು ಹೇಳಿಕೊಂಡಿದ್ದಾರೆ. 

ಸೋಮವಾರ ಇಂಗ್ಲಿಷ್‌ ಸುದ್ದಿ ವಾಹಿನಿ ‘ಎನ್‌ಡಿಟಿವಿ’ಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. 

‘ನನಗೆ ಕಳೆದ 10 ವರ್ಷಗಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳಿಂದ ವಿವಿಧ ರಾಜಕೀಯ ಹುದ್ದೆಗಳ ಅವಕಾಶ ಬಂದಿದೆ. ಕೋವಿಡ್ -19 ನಂತರದ ಕಾಲಘಟ್ಟದಲ್ಲಿ ಎರಡು ಬಾರಿ  ರಾಜ್ಯಸಭಾ ಸ್ಥಾನವನ್ನು ನಾನು ತಿರಸ್ಕರಿಸಿದ್ದೇನೆ,‘ ಎಂದು ಅವರು  ಅವರು ಹೇಳಿದ್ದಾರೆ. 

‘ಮಾನಸಿಕವಾಗಿ ನಾನು ಸಿದ್ಧವಾಗಿಲ್ಲ. ನಾನು ರಾಜಕೀಯ ಪ್ರವೇಶಿಸಲು ಯೋಚಿಸಿದರೆ, ಬಹಿರಂಗವಾಗಿಯೇ ಹೇಳುತ್ತೇನೆ,‘ ಎಂದು ಅವರು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು