ಶುಕ್ರವಾರ, ಜುಲೈ 1, 2022
22 °C

ಭಾರತದಲ್ಲಿ ತಯಾರಾದ ಲಸಿಕೆಯನ್ನು ನಾನು ಪಡೆದಿದ್ದೇನೆ: ಬ್ರಿಟನ್‌ ಪ್ರಧಾನಿ ಜಾನ್ಸನ್

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದಲ್ಲಿ ತಯಾರಾದ ಕೋವಿಶೀಲ್ಡ್‌ ಲಸಿಕೆಯನ್ನು ತಾವು ಪಡೆದುಕೊಂಡಿರುವುದಾಗಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಶುಕ್ರವಾರ ಬಹಿರಂಗಪಡಿಸಿದ್ದಾರೆ.

ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಬೋರಿಸ್ ಜಾನ್ಸನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ‘ಹೈದರಾಬಾದ್‌ ಹೌಸ್‌’ನಲ್ಲಿ ಮಾತುಕತೆ ನಡೆಸಿದರು. ನಂತರ ಇಬ್ಬರೂ ನಾಯಕರು ಜಂಟಿ ಹೇಳಿಕೆ ನೀಡಿದರು.

ಈ ವೇಳೆ ಕೋವಿಡ್‌ ಲಸಿಕೆ ಕುರಿತು ಮಾತನಾಡುತ್ತಿದ್ದ ಬೋರಿಸ್‌ ಜಾನ್ಸನ್‌, ‘ನನ್ನ ತೋಳಿಗೆ ಭಾರತೀಯ ಲಸಿಕೆ ಹಾಕಲಾಗಿದೆ. ಭಾರತಕ್ಕೆ ನನ್ನ ಅನಂತ ನಮನಗಳು’ ಎಂದು ಹೇಳಿದರು.

ಕೋವಿಶೀಲ್ಡ್‌ ಅನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಮತ್ತು ಔಷಧ ತಯಾರಕ ಸಂಸ್ಥೆ ‘ಆಸ್ಟ್ರಾಜೆನೆಕಾ’ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. ಅದನ್ನು ಭಾರತದಲ್ಲಿ ತಯಾರಿಸುವ ಹಕ್ಕನ್ನು ‘ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ’ ಪಡೆದುಕೊಂಡಿದೆ.


2021ರ ಡಿಸೆಂಬರ್‌ 2ರಲ್ಲಿ ಬೂಸ್ಟರ್‌ ಡೋಸ್‌ ಪಡೆದಿದ್ದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು