ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ವಿವಿಧೆಡೆ ‘ಯುಫ್ಲೆಕ್ಸ್‌’ ಕಂಪನಿಯ ಸ್ಥಳಗಳಲ್ಲಿ ಐಟಿ ಶೋಧ

Last Updated 21 ಫೆಬ್ರುವರಿ 2023, 14:50 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ಯಾಕೇಜಿಂಗ್‌ ಕ್ಷೇತ್ರದಲ್ಲಿ ದೇಶದ ದೊಡ್ಡ ಕಂಪನಿ ‘ಯುಫ್ಲೆಕ್ಸ್‌’ಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಮಂಗಳವಾರ ಶೋಧ ನಡೆಸಿದೆ. ತೆರಿಗೆ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಈ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಂಪನಿಯು ನೊಯ್ಡಾದಲ್ಲಿ ಮುಖ್ಯ ಕಚೇರಿ ಹೊಂದಿದೆ. ಮುಖ್ಯ ಕಚೇರಿಯೂ ಸೇರಿದಂತೆ ದೆಹಲಿ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್‌, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕರ್ನಾಟಕದಲ್ಲಿನ ಕಂಪನಿಗೆ ಸಂಬಂಧಿಸಿದ 60ರಿಂದ 70 ಕಡೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT