ಗುರುವಾರ , ಜೂನ್ 30, 2022
22 °C

ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಪುತ್ರಿ, ಅಳಿಯನ ಮನೆ ಮೇಲೆ ಐಟಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರ ಮಗಳು ಸೆಂಥಮರೈ, ಅಳಿಯ ಶಬರೀಶನ್ ಮತ್ತು ಆಪ್ತರ ಚೆನ್ನೈನಲ್ಲಿರುವ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸೀನಿಕ್ ಈಸ್ಟ್ ಕೋಸ್ಟ್ ರಸ್ತೆಯಲ್ಲಿರುವ ಸ್ಟಾಲಿನ್ ಅವರ ಪುತ್ರಿ ಸೆಂಥಮರೈ ಮತ್ತು ಶಬರೀಶನ್ ಅವರು ವಾಸವಿರುವ ನೀಲಾಂಗರೈ ನಿವಾಸ ಮತ್ತು ಒಂದೆರಡು ಕಚೇರಿಗಳಲ್ಲಿ ಬೆಳಿಗ್ಗೆಯಿಂದ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಸೆಂಥಮರೈ ಚೆನ್ನೈನಲ್ಲಿ ಸಿಬಿಎಸ್ಇ ಶಾಲೆಯನ್ನು ನಡೆಸುತ್ತಿದ್ದರೆ, ಶಬರೀಶನ್ ಒಬ್ಬ ಉದ್ಯಮಿ. ಜೊತೆಗೆ, ಸ್ಟಾಲಿನ್‌ ಅವರಿಗೆ ರಾಜಕೀಯ ಸಲಹೆಗಾರರಾಗಿದ್ದಾರೆ. ಸ್ಟಾಲಿನ್ ಅವರ ಕೆಲವೇ ಕೆಲವು ನಂಬಿಕಸ್ಥ ವ್ಯಕ್ತಿಗಳಲ್ಲಿ ಶಬರೀಶನ್ ಸಹ ಒಬ್ಬರು.

ಇದೇ ಏಪ್ರಿಲ್ 6ರಂದು ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಡಿಎಂಕೆ, ಚುನಾವಣಾ ಕಣದಲ್ಲಿರುವ ಪ್ರಮುಖ ರಾಜಕೀಯ ಪಕ್ಷಗಳಲ್ಲೊಂದಾಗಿದೆ. 
 

ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ...

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು