ಸಾಯುತ್ತೇನೆಯೇ ಹೊರತು ಬಿಜೆಪಿಯೊಂದಿಗೆ ಮತ್ತೆ ಕೈ ಜೋಡಿಸುವುದಿಲ್ಲ: ನಿತೀಶ್ ಕುಮಾರ್

ಪಟ್ನಾ: ಬಿಹಾರದಲ್ಲಿ ಜೆಡಿಯು ಪಕ್ಷವು ಬಿಜೆಪಿಯೊಂದಿಗೆ ಮತ್ತೊಮ್ಮೆ ಕೈ ಜೋಡಿಸುವ ಸಾಧ್ಯತೆಯನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, 'ಸಾಯುತ್ತೇನೆಯೇ ಹೊರತು ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಿಲ್ಲ' ಎಂದು ಹೇಳಿದ್ದಾರೆ.
ಮೈತ್ರಿ ಸರ್ಕಾರವಿದ್ದ ಸಂದರ್ಭದಲ್ಲಿ, ತನ್ನ ಹಿಂದುತ್ವ ಸಿದ್ಧಾಂತದ ಬಗ್ಗೆ ಸದಾ ಎಚ್ಚರಿಕೆ ಹೊಂದಿದ್ದ ಮುಸ್ಲಿಮರೂ ಸೇರಿದಂತೆ ಜೆಡಿಯುನ ಎಲ್ಲ ಬೆಂಬಲಿಗರ ಮತಗಳನ್ನು ಬಿಜೆಪಿ ಪಡೆಯುತ್ತಿತ್ತು ಎಂಬುದನ್ನು ನಿತೀಶ್ ನೆನಪಿಸಿಕೊಂಡಿದ್ದಾರೆ.
ಮುಂಬರುವ ಸಾರ್ವತ್ರಿಕ ಚುನಾವಣೆ ವೇಳೆ, ಬಿಹಾರದಲ್ಲಿರುವ 40 ಲೋಕಸಭೆ ಕ್ಷೇತ್ರಗಳ ಪೈಕಿ 36ರಲ್ಲಿ ಗೆಲುವು ಸಾಧಿಸುವುದಾಗಿ ಬಿಜೆಪಿ ಹೇಳಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ನಿತೀಶ್ ನೇತೃತ್ವದ ಜೆಡಿಯು 2017ರಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಈ ಬಗ್ಗೆ ಮಾತನಾಡಿರುವ ಅವರು, ಈಗಿನ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹಾಗೂ ಅವರ ತಂದೆ ಲಾಲು ಪ್ರಸಾದ್ ಯಾದವ್ ವಿರುದ್ಧ ಆಧಾರ ರಹಿತ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದ ಬಳಿಕ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದು ತಪ್ಪು ಎಂದು ಒಪ್ಪಿಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.