ಶುಕ್ರವಾರ, ಸೆಪ್ಟೆಂಬರ್ 24, 2021
24 °C

ಸ್ವದೇಶಿ ನಿರ್ಮಿತ ವಿಮಾನವಾಹಕ ಯುದ್ಧನೌಕೆಯ ಪ್ರಯೋಗಾರ್ಥ ಸಂಚಾರ ಆರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸ್ವದೇಶಿ ನಿರ್ಮಿತ ಮೊದಲ ವಿಮಾನವಾಹಕ ಯುದ್ಧ ನೌಕೆ (ಐಎಸಿ) ವಿಕ್ರಾಂತ್‌ ಬುಧವಾರ ಸಮುದ್ರದಲ್ಲಿ ತನ್ನ ಮೊದಲ ಪ್ರಯೋಗಾರ್ಥ ಸಂಚಾರ ಆರಂಭಿಸಿತು.

ದೇಶದ ಅತಿದೊಡ್ಡ ಮತ್ತು ಅತ್ಯಂತ ಸಂಕೀರ್ಣದಿಂದ ಕೂಡಿರುವ ಯುದ್ಧ ನೌಕೆ ಇದಾಗಿದ್ದು, ಸಂಚಾರ ಆರಂಭಿಸಿದ ಈ ದಿನ ಭಾರತೀಯ ನೌಕಾಪಡೆಯ ಪಾಲಿಗೆ ಐತಿಹಾಸಿಕ ದಿನವೆಂದು ಬಣ್ಣಿಸಲಾಗಿದೆ.

ಅತ್ಯಾಧುನಿಕ ವಿಮಾನವಹಕ ಯುದ್ಧ ನೌಕೆಯನ್ನು ದೇಶೀಯವಾಗಿ ವಿನ್ಯಾಸಗೊಳಿಸಿ, ನಿರ್ಮಿಸಿ, ಸಂಯೋಜಿಸಲಾಗಿದೆ. ಈ ಮೂಲಕ ಭಾರತವು ಜಗತ್ತಿನಲ್ಲಿ ಇಂಥ ಸಾಮರ್ಥ್ಯ ಹೊಂದಿರುವ ಕೆಲವೇ ಕೆಲವು ದೇಶಗಳ ಗುಂಪಿಗೆ ಸೇರಿದಂತಾಗಿದೆ ಎಂದು ನೌಕಾಪಡೆ ತಿಳಿಸಿದೆ.

50 ವರ್ಷಗಳ ಹಿಂದೆ 1971ರ ಯುದ್ಧದಲ್ಲಿ ಇದೇ ಹೆಸರಿನ ಈ ಮೊದಲಿನ ವಿಮಾನವಾಹಕ ಯುದ್ಧನೌಕೆ  ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಮುಂದಿನ ವರ್ಷದ ದ್ವಿತೀಯಾರ್ಧದಲ್ಲಿ ಈ ಯುದ್ಧ ನೌಕೆ ಭಾರತೀಯ ನೌಕಾಪಡೆ ಸೇರ್ಪಡೆಗೊಳ್ಳಲಿದೆ.

‘ಆತ್ಮನಿರ್ಭರ ಭಾರತ್’ (ಸ್ವಾವಲಂಬಿ ಭಾರತ) ಮತ್ತು ‘ಮೇಕ್ ಇನ್ ಇಂಡಿಯಾ’ ಭಾಗವಾಗಿ ಕೈಗೊಂಡ ಈ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ನೌಕಾಪಡೆಯ ವಕ್ತಾರ ಕಮಾಂಡರ್‌ ವಿವೇಕ್‌ ಮಧ್ವಲ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು