ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.2ರಂದು ನೌಕಾಪಡೆಗೆ ಐಎಸಿ ವಿಕ್ರಾಂತ್‌ ಅಧಿಕೃತ ಸೇರ್ಪಡೆ: ಮೋದಿ ಭಾಗಿ

Last Updated 22 ಆಗಸ್ಟ್ 2022, 16:26 IST
ಅಕ್ಷರ ಗಾತ್ರ

ಕೊಚ್ಚಿ (ಪಿಟಿಐ): ‘ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಮೊದಲ ವಿಮಾನವಾಹಕ ಯುದ್ಧನೌಕೆ ‘ಐಎಸಿ ವಿಕ್ರಾಂತ್‌’ ಅನ್ನು ಸೆಪ್ಟೆಂಬರ್‌ 2ರಂದು ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆ ಮಾಡಲಾಗುತ್ತದೆ. ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ನಲ್ಲಿ (ಸಿಎಸ್‌ಎಲ್‌) ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ ಸುಮಾರು ₹20 ಸಾವಿರ ಕೋಟಿ ವೆಚ್ಚದಲ್ಲಿ ಇದನ್ನು ಅಭಿವೃದ್ಧಿಪಡಿಸಿದೆ. ಪ್ರಧಾನಿ ಮೋದಿ ಅವರು ಈ ಯುದ್ಧನೌಕೆಯನ್ನು ನೌಕಾಪಡೆಗೆ ಹಸ್ತಾಂತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಐಎನ್‌ಎಸ್‌ ವಿಕ್ರಾಂತ್‌ನ ನಿವೃತ್ತ ನೌಕರರು, ರಕ್ಷಣಾ ಸಚಿವಾಲಯದ ಅಧಿಕಾರಿಗಳು, ರಾಜ್ಯ ಸರ್ಕಾರದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸುಮಾರು 1,500–2,000 ಮಂದಿ ನಾಗರಿಕರಿಗೂ ಪ್ರವೇಶ ಇರಲಿದೆ’ ಎಂದು ತಿಳಿಸಿವೆ.

ಸಮುದ್ರದಲ್ಲಿ ನೌಕೆಬಳಕೆಯ ನಾಲ್ಕನೇ ಮತ್ತು ಅಂತಿಮ ಪ್ರಯೋಗವನ್ನು ಹೋದ ತಿಂಗಳು ಯಶಸ್ವಿಯಾಗಿ ನಡೆಸಲಾಗಿತ್ತು.

‘ವಿಕ್ರಾಂತ್‌’ ಮೂಲಕ ಮಿಗ್–29ಕೆ ಯುದ್ಧವಿಮಾನ, ಕಾಮೊವ್–31 ಹೆಲಿಕಾಪ್ಟರ್‌ಗಳು, ಎಂಎಚ್–60ಆರ್‌ ಬಹುಪಯೋಗಿ ಹೆಲಿಕಾಪ್ಟರ್‌ಗಳನ್ನು ನಿರ್ವಹಣೆ ಮಾಡಬಹುದಾಗಿದೆ.

ನೌಕೆಯು 2,300 ವಿಭಾಗಗಳನ್ನು ಹೊಂದಿದ್ದು, 1,700 ಸಿಬ್ಬಂದಿಗೆ ಪೂರಕವಾಗಿ ವಿನ್ಯಾಸಗೊಳಿಸಲಾಗಿದೆ. ಮಹಿಳಾ ಅಧಿಕಾರಿಗಳಿಗಾಗಿಯೇ ವಿಶೇಷವಾಗಿ ಕ್ಯಾಬಿನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ನೌಕೆಯು 262 ಮೀಟರ್‌ ಉದ್ದ, 62 ಮೀಟರ್‌ ಅಗಲ ಮತ್ತು 59 ಮೀಟರ್ ಎತ್ತರವಿದೆ. ಇದರ ನಿರ್ಮಾಣಕಾರ್ಯ 2009ರಲ್ಲಿ ಆರಂಭಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT