ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಎಂಐ–17ವಿ ಹೆಲಿಕಾಪ್ಟರ್ ಪತನ: 13 ಮಂದಿ ಸಾವು

ನವದೆಹಲಿ: ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ವಾಯುಪಡೆಯ ಎಂಐ–17ವಿ5 ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಕೂನೂರಿನ ಸಮೀಪ ಪತನಗೊಂಡಿದೆ. ರಾವತ್ ಸೇರಿದಂತೆ 14 ಮಂದಿ ಹೆಲಿಕಾಪ್ಟರ್ನಲ್ಲಿದ್ದರು ಎನ್ನುವ ಮಾಹಿತಿ ಇದ್ದು, 13 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಹೆಲಿಕಾಪ್ಟರ್ ಪತನವಾಗಲು ನಿಖರ ಕಾರಣ ಈವರೆಗೂ ತಿಳಿದು ಬಂದಿಲ್ಲ. ಹೆಲಿಕಾಪ್ಟರ್ ಹಾರಾಟ ನಡೆಸಿದ್ದ ಮಾರ್ಗದಲ್ಲಿ ದಟ್ಟ ಮಂಜು ಆವರಿಸಿದ್ದ ಕಾರಣ ಸಂಚಾರ ಮಾರ್ಗದ ಗೋಚರತೆಯಲ್ಲಿ ಉಂಟಾಗಿರುವ ಅಸ್ಪಷ್ಟತೆಯಿಂದ ಅಪಘಾತ ಸಂಭವಿಸಿರಬಹುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.
13 of the 14 personnel involved in the military chopper crash in Tamil Nadu have been confirmed dead. Identities of the bodies to be confirmed through DNA testing: Sources
— ANI (@ANI) December 8, 2021
ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ 13 ಮಂದಿ ಸಾವಿಗೀಡಾಗಿರುವುದು ಖಚಿತ ಪಟ್ಟಿರುವುದಾಗಿ ಎಎನ್ಐ ಟ್ವೀಟಿಸಿದೆ.
ಡಿಎನ್ಎ ಪರೀಕ್ಷೆ ನಡೆಸುವ ಮೂಲಕ ಮೃತ ದೇಹಗಳ ಗುರುತು ಖಚಿತಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.