ಬುಧವಾರ, ಜೂನ್ 16, 2021
28 °C

ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಪತನ: ಪೈಲಟ್‌ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮೊಗ (ಪಂಜಾಬ್‌): ಪಂಜಾಬ್‌ನ ಮೊಗ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮಿಗ್-21 ಬಾಯಿಸನ್ ವಿಮಾನವು ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಪೈಲಟ್‌ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

‘ಸೂರತ್‌ಗಡದಲ್ಲಿ ಎಂದಿನಂತೆ ತರಬೇತಿ ನಡೆಸುತ್ತಿದ್ದಾಗ ಗುರುವಾರ ತಡರಾತ್ರಿ ವಿಮಾನವು ಮೊಗ ಜಿಲ್ಲೆಯ ಗ್ರಾಮವೊಂದರಲ್ಲಿ  ಪತನಗೊಂಡಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಲಾಗಿದೆ’ ಎಂದು ಅವರು ಹೇಳಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಭಾರತೀಯ ವಾಯುಪಡೆ(ಐಎಎಫ್‌),‘ಪಶ್ಚಿಮ ವಲಯದಲ್ಲಿ ಗುರುವಾರ ತಡರಾತ್ರಿ ಐಎಎಫ್‌ನ ಮಿಗ್-21  ಯುದ್ಧವಿಮಾನವು ಪತನಗೊಂಡಿದೆ. ಈ ವೇಳೆ ಪೈಲಟ್‌ ಸ್ಕ್ವಾಡ್ರನ್ ಲೀಡರ್‌ ಅಭಿನವ್‌ ಚೌಧರಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರ ಕುಟುಂಬದವರಿಗೆ ಸದಾ ನಮ್ಮ ಬೆಂಬಲ ಇರುತ್ತದೆ’ ಎಂದು ಐಎಎಫ್‌ ಹೇಳಿದೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು