ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಆಫ್ರಿಕಾದಿಂದ ಗ್ವಾಲಿಯರ್‌ಗೆ ಬಂದ ಎರಡನೇ ಬ್ಯಾಚ್‌ನ 12 ಚೀತಾಗಳು

Last Updated 18 ಫೆಬ್ರವರಿ 2023, 5:42 IST
ಅಕ್ಷರ ಗಾತ್ರ

ಭೋಪಾಲ್: ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಶನಿವಾರ ಬೆಳಿಗ್ಗೆ ಮಧ್ಯಪ್ರದೇಶದ ಗ್ವಾಲಿಯರ್‌ಗೆ ತರಲಾಗಿದೆ.

ಬಳಿಕ, ಅವುಗಳನ್ನು ಶಿಯೊಪುರ್ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ನಿಯಮದಂತೆ ಕ್ವಾರಂಟೈನ್ ಪ್ರದೇಶದಲ್ಲಿ ಬಿಡಲಾಗುತ್ತದೆ.

7 ಗಂಡು ಮತ್ತು 5 ಹೆಣ್ಣು ಚೀತಾಗಳನ್ನು ಹೊತ್ತ ವಾಯುಪಡೆಯ ವಿಮಾನವು ಬೆಳಿಗ್ಗೆ 10 ಗಂಟೆ ಸುಮಾರಿಗೆ ಗ್ವಾಲಿಯರ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಮೀಬಿಯಾದಿಂದ ತರಲಾಗಿದ್ದ 8 ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಉದ್ಯಾನಕ್ಕೆ ಬಿಡಲಾಗಿತ್ತು.

ಮಧ್ಯಾಹ್ನ 12 ಗಂಟೆಗೆ ವಾಯುಪಡೆ ಹೆಲಿಕಾಪ್ಟರ್‌ನಲ್ಲಿ ಚೀತಾಗಳನ್ನು ಗ್ವಾಲಿಯರ್‌ನಿಂದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕೊಂಡೊಯ್ಯಲಾಗುತ್ತದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಸಚಿವ ಭೂಪೇಂದರ್ ಯಾದವ್ ಈ ಚೀತಾಗಳನ್ನು ಕ್ವಾರಂಟೈನ್ ಪ್ರದೇಶಕ್ಕೆ ಬಿಡುಗಡೆ ಮಾಡಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT