ಶ್ರೀನಗರ: ಭಾರತೀಯ ವಾಯುಪಡೆಯು (ಐಎಎಫ್) ಇದೇ 26ರಂದು ಇಲ್ಲಿನ ಪ್ರಸಿದ್ಧ ದಾಲ್ ಸರೋವರದ ಮೇಲೆ ‘ಏರ್ ಶೋ’ ನಡೆಸಲಿದೆ.

ಜಮ್ಮು ಮತ್ತು ಕಾಶ್ಮೀರದ ಯುವ ಸಮುದಾಯವನ್ನು ಐಎಎಫ್ ಸೇರುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಐಎಎಫ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ವಿವಿಧ ಶಾಲಾ, ಕಾಲೇಜುಗಳ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ ಎಂದ ಅವರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಕಾಶ್ಮೀರದ ವಿಭಾಗೀಯ ಆಯುಕ್ತ ಪಾಂಡುರಂಗ ಕೆ. ಪೋಲ್ ಅವರು, ವಾಯು ಪ್ರದರ್ಶನದ ಮುಖ್ಯ ಉದ್ದೇಶವು ಕಣಿವೆಯ ಯುವ ಸಮುದಾಯವನ್ನು ಭಾರತೀಯ ವಾಯುಪಡೆಗೆ ಸೇರಲು ಪ್ರೇರೇಪಿಸುವುದು ಹಾಗೂ ಈ ಪ್ರದೇಶದಲ್ಲಿನ ಪ್ರವಾಸೋದ್ಯಮವನ್ನು ಉತ್ತೇಜಿಸುವುದಾಗಿದೆ ಎಂದರು.

‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಭಾಗವಾಗಿ ಐಎಎಫ್ ಈ ಪ್ರದರ್ಶನ ಏರ್ಪಡಿಸಿದೆ. ‘ನಿಮ್ಮ ಕನಸುಗಳಿಗೆ ರೆಕ್ಕೆ ನೀಡಿ’ ಎಂಬುದು ಈ ಕಾರ್ಯಕ್ರಮದ ‘ಥೀಮ್’ ಆಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ 700 ಶಿಕ್ಷಕರೂ ಪ್ರದರ್ಶನ ವೀಕ್ಷಿಸಲಿದ್ದಾರೆ.

ಇದನ್ನೂ ಓದಿ... ಕೋವಿಡ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ, ಭಾರತವೇ ಮುಂದು: ಅಧ್ಯಯನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.