ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಎಸ್‌ ಈಗ ಐಎಎಸ್‌ ಅಸೋಸಿಯೇಷನ್

Last Updated 7 ಸೆಪ್ಟೆಂಬರ್ 2020, 12:47 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ನಾಗರಿಕ ಸೇವೆಗಳ (ಐಸಿಎಸ್‌) ಸಂಸ್ಥೆಗೆ ಐಎಎಸ್‌ ಅಸೋಷಿಯೇಷನ್‌ ಎಂದು ಮರುನಾಮಕರಣ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶನಿವಾರ ನಡೆದ ಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಣಯ ಕೈಗೊಳ್ಳಲಾಯಿತು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ದುರ್ಗಾ ಶಂಕರ್‌ ಮಿಶ್ರಾ ಹೇಳಿದ್ದಾರೆ.

‘ಈ ಹೆಸರು ಸಾಂಕೇತಿಕವಾಗಿದ್ದು, ದೇಶದ ಎಲ್ಲಾ ಭಾಗಗಳಲ್ಲಿ ಕಾರ್ಯನಿರ್ವಹಿಸುವ ಐಎಎಸ್‌ ಅಧಿಕಾರಿಗಳನ್ನು ಪ್ರತಿನಿಧಿಸಲಿದೆ. ನಾವು ಕೈಗೊಂಡಿರುವ ನಿರ್ಧಾರವು ಐತಿಹಾಸಿಕವಾದುದು. ಇದು ಭಾರತೀಯ ನೀತಿಗಳನ್ನು ಎತ್ತಿ ಹಿಡಿಯಲಿದೆ. ‘ಯೋಗಃ ಕರ್ಮಸು ಕೌಶಲಮ್‌’ ಎಂಬುದು ಸಂಸ್ಥೆಯ ಧ್ಯೇಯ ವಾಕ್ಯವಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಮಿಶ್ರಾ ನುಡಿದಿದ್ದಾರೆ.

ದೇಶದಾದ್ಯಂತ ಒಟ್ಟು 5,205 ಐಎಎಸ್‌ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಹಾಲಿ ಮತ್ತು ನಿವೃತ್ತ ಅಧಿಕಾರಿಗಳು ಈ ಸಂಸ್ಥೆಯ ಸದಸ್ಯರಾಗಿರುತ್ತಾರೆ.

‘ಐಸಿಎಸ್‌ಗೆ ಮರುನಾಮಕರಣ ಮಾಡಬೇಕೆಂದು ಬಹಳ ಹಿಂದೆಯೇ ಯೋಚಿಸಲಾಗಿತ್ತು. ಆ ಕೆಲಸ ಈಗ ಆಗಿದೆ. ಐಎಎಸ್‌, ಐಸಿಎಸ್‌ಗಿಂತಲೂ ಉನ್ನತವಾದುದು. ಈ ಸಂಸ್ಥೆಯು ದೇಶದ ಎಲ್ಲಾ ಭಾಗಗಳಲ್ಲಿರುವ ಐಎಎಸ್‌ ಅಧಿಕಾರಿಗಳನ್ನು ಪ್ರತಿನಿಧಿಸಲಿದೆ’ ಎಂದು ಸಂಸ್ಥೆಯ ಉಪಾಧ್ಯಕ್ಷ ಸಂಜೀವ್‌ ಚೋಪ್ರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT